ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಸ್ಥಿತ್ವಕ್ಕೆ ತರಲು ಹಗಲಿರುಳು ಕಸರತ್ತುಗಳನ್ನು ಮಾಡುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮಂಗಳವಾರ ಪ್ರಖ್ಯಾತ ಜ್ಯೋತಿಷಿಯೊಬ್ಬರನ್ನು ಭೇಟಿಯಾಗಿ ಭವಿಷ್ಯ ಕೇಳಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಕೇರಳ ಮೂಲದ ಜ್ಯೋತಿಷಿ ರಮೇಶ್ ಅವರ ಅಗಸ್ತ್ಯ ಮಹರ್ಷಿ ನಿವಾಸಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಪಕ್ಷದ ನಾಯಕರ ಜೊತೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ಕೇಳಿದಾಗ ರಮೇಶ್ ಅವರು ಈ ಬಾರಿ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತದೆ ಎಂದಿರುವುದಾಗಿ ವರದಿಯಾಗಿದೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಮೋದಿ ಭರ್ಜರಿ ಬಹುಮತದೊಂದಿಗೆ ಪ್ರಧಾನಿ ಆಗುತ್ತಾರೆ ಎಂದು ರಮೇಶ್ ಕುಮಾರ್ ಭವಿಷ್ಯ ನೀಡಿದ್ದರು.
-ಉದಯವಾಣಿ
Comments are closed.