ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 12 ರಂದು ಮತದಾನ ನಡೆಯುತ್ತಿದ್ದು, ಅಂದು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಣೆ ಮಾಡಲು ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರು ಹಾಗೂ ಸಕ್ಷಮ ಪ್ರಾಧಿಕಾರಗಳಿಗೆ ಸೂಚಿಸಿ ಆದೇಶ ಹೊರಡಿಸುವಂತೆ ಭಾರತ ಚುನಾವಣಾ ಆಯೋಗ ಸಿಬ್ಬಂದಿ ಮತ್ತು ಆಡಳಿತಾಸುಧಾರಣಾ ಇಲಾಖೆಗೆ ನಿರ್ದೇಶನ ನೀಡಿದೆ.
ಮತದಾನ ನಡೆಯುವ ದಿನದಂದು ಸರ್ಕಾರಿ ಕಚೇರಿಗಳು, ಸರ್ಕಾರಿ ಶಾಲೆಗಳು, ಅನುದಾನಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ರಾಜ್ಯ, ಕೇಂದ್ರ ಸರ್ಕಾರದ ಕಚೇರಿಗಳು, ಕಾರ್ಖಾನೆಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕ್‍ಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರಿ ಸಂಘದ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕಾಗಿದೆ.
ಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾ ಪ್ರತಿನಿಧಿ ಕಾಯ್ದೆ 1954 ಸೆಕ್ಷನ್ 135(ಬಿ) ಅಡಿಯಲ್ಲಿ ವೇತನ ಸಹಿತ ರಜೆ ಘೋಷಿಸುವಂತೆ ರಾಜ್ಯದ ಸಹಾಯಕ ಮುಖ್ಯ ಚುನಾವಣಾಧಿಕಾರಿ ಎಸ್.ಎನ್.ರಾಮಕೃಷ್ಣ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ಮತದಾನದಂದು ರಜೆ ನೀಡಿರುವ ಆದೇಶ ಹೊರಡಿಸಿರುವ ಪ್ರತಿಯನ್ನು ತಮ್ಮ ಕಚೇರಿಗೆ ಕಳುಹಿಸಿಕೊಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Comments are closed.