ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ವಿಚಾರಣೆಯಲ್ಲಿ ತಮಿಳುನಾಡಿಗೆ 4 ಟಿಎಂಸಿ ನೀರನ್ನು ಬಿಡುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.
ಕಾವೇರಿ ನೀರು ಬಿಡುವ ವಿಚಾರ ಸಂಬಂಧ ತಮಿಳುನಾಡು ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಅವರು, ಕೂಡಲೇ ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದಾರೆ.
ಅಂತೆಯೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಕೆ ಮಾಡುವಂತೆಯೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗೆ ಸೂಚನೆ ನೀಡಿದೆ. ಇನ್ನು ಪ್ರಕರಣದ ವಿಚಾರಣೆಯನ್ನು ಮೇ 8ಕ್ಕೆ ಮುಂದೂಡಿಕೆ ಮಾಡಿದೆ.
Comments are closed.