ಕರ್ನಾಟಕ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಯೋಗಿ ಆದಿತ್ಯನಾಥ

Pinterest LinkedIn Tumblr

ಶಿರಸಿ: ಕರ್ನಾಟಕ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ, ಅದೇ ಉತ್ತರ ಪ್ರದೇಶದಲ್ಲಿ ಕಾನೂನು ನಮ್ಮ ಹಿಡಿತದಲ್ಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದರು.

ಇಲ್ಲಿನ ವಿಕಾಸಾಶ್ರಮ ಮೈದಾನದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಆಗುತ್ತಿದೆ. ಆದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ, ರಾಜ್ಯದಲ್ಲಿ ಸರ್ಕಾರ ಯಾವ ರೀತಿ ಇರುತ್ತದೆಯೋ ಹಾಗೆಯೇ ಅಲ್ಲಿನ ವ್ಯವಸ್ಥೆ ಇರುತ್ತದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಭಿವೃದ್ಧಿ ಮಾಡುವಲ್ಲಿ ವಿಫಲಗೊಂಡಿದೆ ಎಂದರು.

ಕಾಂಗ್ರೆಸ್ ಸರ್ಕಾರ ಜಿಹಾದಿಗಳನ್ನು ಬೆಳೆಸುವ ಪ್ರಯತ್ನ‌ ಮಾಡುತ್ತಿದೆ. ಆದರೆ ಉತ್ತರ ಪ್ರದೇಶದಲ್ಲಿ ಜಿಹಾದಿಗಳನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದೇವೆ ಎಂದರು.

ರಾಜ್ಯದಲ್ಲಿ ಹಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿಲ್ಲ. ಕರ್ನಾಟಕದಲ್ಲಿ ವ್ಯವಸ್ಥೆ ವಿಕಾಸದೆಡೆಗೆ ಹೋಗಬೇಕಾಗಿದೆ. ಅದಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಳ್ವಿಕೆಗೆ ಬರಬೇಕು ಎಂದು – ಯೋಗಿ ಆದಿತ್ಯನಾಥ ಹೇಳಿದರು.

ಯೋಗಿ ಆದಿತ್ಯನಾಥ ವೇದಿಕೆಗೆ ಬಂದ ಕೂಡಲೇ ಬಿಜೆಪಿ ಯುಖಂಡರು ಯೋಗಿ ಕಾಲು ಮುಟ್ಟಿ ನಮಸ್ಕರಿಸಿದರು.

ಈ ಕಾರ್ಯಕ್ರಮದಲ್ಲಿ ಸಚಿವ ಅನಂತಕುಮಾರ ಹೆಗಡೆ, ಅಭ್ಯರ್ಥಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿ. ಎಸ್ ಪಾಟೀಲ ಸೇರಿದಂತೆ ಹಲವರು ಭಾಗಿಯಾಗಿದ್ದರು.

Comments are closed.