ಪಾಂಡವಪುರ: ನಾನು ಕೂಡ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ರೀತಿ ಗೌಡ. ನಾನೂ ಮುಖ್ಯಮಂತ್ರಿಯಾಗುತ್ತೇನೆ ಎಂದು ಇಂಧನ ಸಚಿವ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ.
ನಗರದಲ್ಲಿ ಶನಿವಾರ ಪ್ರಚಾರ ಭಾಷಣ ಮಾಡಿ, ನಾನು ಕೂಡ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ರೀತಿ ಗೌಡ. ನಾನೂ
ಮುಖ್ಯಮಂತ್ರಿಯಾಗುತ್ತೇನೆ. ಹೀಗಾಗಿ ಜೆಡಿಎಸ್‌ನ ಯಾವುದೇ ಗೊಡ್ಡು ಬೆದರಿಕೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕ್ಷೇತ್ರದ ಮತದಾರರು ಕಿವಿಗೊಡದೆ ಕಾಂಗ್ರೆಸ್ ಬೆಂಬಲಿತ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಕೈ ಬಲಪಡಿಸಬೇಕು ಎಂದರು.
-Udayavani
Comments are closed.