ಬಾದಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಐಟಿ ಅಧಿಕಾರಿಗಳು ಸೋಮವಾರ ತಡರಾತ್ರಿ ಕಾಂಗ್ರೆಸ್‌ಗೆ ಶಾಕ್ ನೀಡಿದ್ದಾರೆ.
ಕಾಂಗ್ರೆಸ್ ನಾಯಕನ ರೆಸಾರ್ಟ್ ಮತ್ತು ಹೊಟೇಲ್ ಮಾಡಿ ಸುಮಾರು 13 ಲಕ್ಷ ರೂಪಾಯಿ ಜಪ್ತಿ ಮಾಡಿರುವ ಬಗ್ಗೆ ವರದಿಯಾಗಿದೆ.
10ಕ್ಕೂ ಹೆಚ್ಚು ಅಧಿಕಾರಿಗಳು ಏಕಾಏಕಿ ಕೃಷ್ಣ ಹೆರಿಟೇಜ್ ರೆಸಾರ್ಟ್ ಮತ್ತು ಹೊಟೇಲ್ ಮಯೂರ ಮೇಲೆ ದಾಳಿ ನಡೆಸಲಾಗಿದೆ.
ದಾಳಿ ನಡೆದ ವೇಳೆ ಹೊಟೇಲ್‌ನಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ಮತ್ತು ಕಾಂಗ್ರೆಸ್ ನಾಯಕ ಸಿಎಂ ಆಪ್ತ ಸಿ.ಎಂ.ಇಬ್ರಾಹಿಂ ಅವರಿದ್ದರು ಎಂದು ತಿಳಿದು ಬಂದಿದೆ.
ಕೃಷ್ಣ ಹೆರಿಟೇಜ್‌ನಲ್ಲಿ 11 ಲಕ್ಷ ರೂಪಾಯಿ ಮತ್ತು ಹೊಟೇಲ್ ಮಯೂರದಲ್ಲಿ 2.5 ಲಕ್ಷ ರೂಪಾಯಿ ಹಣ ಜಪ್ತಿ ಮಾಡಿರುವ ಬಗ್ಗೆ ತಿಳಿದು ಬಂದಿದೆ.
-Udayavani
Comments are closed.