ಕರ್ನಾಟಕ

ಸಿದ್ದರಾಮಯ್ಯನಹುಂಡಿಯಲ್ಲಿ ಸಿದ್ದರಾಮಯ್ಯ, ಶಿಕಾರಿಪುರದಲ್ಲಿ ಯಡಿಯೂರಪ್ಪ, ಕೇತಗಾನಹಳ್ಳಿಯಲ್ಲಿ ಎಚ್​.ಡಿ ಕುಮಾರಸ್ವಾಮಿ ಮತ

Pinterest LinkedIn Tumblr

ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ನಾನಾ ಗಣ್ಯರು ಸರದಿಯ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಪೇಜಾವರ ಶ್ರೀ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್​.ಯಡಿಯೂರಪ್ಪ ಸೇರಿ ಹಲವು ಪ್ರಮುಖರು ಮತದಾನ ಮಾಡಿದರು.

ಕೇತಗಾನಹಳ್ಳಿಯಲ್ಲಿ ಎಚ್​.ಡಿ ಕುಮಾರಸ್ವಾಮಿ
ರಾಮನಗರ: ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ ಕುಮಾರಸ್ವಾಮಿ ಅವರು ಮಾಗಡಿ ವಿಧಾನಸಭೆ ಕ್ಷೇತ್ರದ ಕೇತಗಾನಹಳ್ಳಿಯಲ್ಲಿ ಮತಚಲಾಯಿಸಿದರು.

ಎಚ್​.ಡಿ. ಕುಮಾರಸ್ವಾಮಿ ಅವರು ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ತಮ್ಮ ಮತದಾನದ ಹಕ್ಕು ಹೊಂದಿದ್ದು, ಇಂದು ಬೆಳಗ್ಗೆ ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಮಾಗಡಿ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಎ. ಮಂಜು ಅವರ ಜತೆ ಆಗಮಿಸಿ ಮತಗಟ್ಟೆ ಸಂಖ್ಯೆ 182ರಲ್ಲಿ ಮತದಾನ ಮಾಡಿದರು.

ಮತ ಚಲಾವಣೆ ಮಾಡಲು ರಾಮನಗರಕ್ಕೆ ತೆರಳುವುದಕ್ಕೂ ಮೊದಲು ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಅವರು ಬೆಂಗಳೂರಿನ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಇನ್ನು ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಶಾಸಕ ಎಂ.ಸಿ.ಅಶ್ವಥ್ ಅವರು ಮಂಗಳವಾರಪೇಟೆಯ ಮತಗಟ್ಟೆ ಸಂಖ್ಯೆ 76 ರಲ್ಲಿ ದಂಪತಿ ಸಮೇತರಾಗಿ ಬಂದು ಮತದಾನ ಮಾಡಿದರು.

ಕನಕಪುರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಂದಿಗೌಡ ಅವರು ಪಟ್ಟಣದ ಮಾನಸ ಶಾಲೆಯ 73ನೇ ಮತಗಟ್ಟೆಯಲ್ಲಿ ಮತದಾನ ಮಾಡಿದರು.

Comments are closed.