ಮೈಸೂರು: ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ದ್ವಿತೀಯ ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದ ಪವಿತ್ರಾ (18) ಮೃತ ದುರ್ದೈವಿ. ನಂಜನಗೂಡು ತಾಲೂಕಿನ ಚನ್ನಪಟ್ಟಣದಲ್ಲಿ ಘಟನೆ ನಡೆದಿದ್ದು, ಸುರೇಶ್ ಎಂಬಾತ ತನ್ನನ್ನು ಮದುವೆಯಾಗುವಂತೆ ಯುವತಿಯನ್ನು ಪೀಡಿಸುತ್ತಿದ್ದದ್ದೇ ಯುವತಿ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಬಸ್ನಲ್ಲಿ ಕಾಲೇಜಿಗೆ ಹೋಗಿ ಬರುವಾಗ ಮದುವೆಯಾಗದಿದ್ದರೆ ಮಾನಹಾನಿ ಮಾಡುದಾಗಿ ಯುವಕ ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ಪವಿತ್ರಾ ಸೀಮೆಎಣ್ಣೆ ಸುರಿದುಕೊಂಡಿದ್ದಾಳೆ. ಸುಟ್ಟಗಾಯಗಳಾಗಿದ್ದ ಪವಿತ್ರಾಳನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಉಪಯೋಗವಾಗಿಲ್ಲ.
ಸಾವಿಗೂ ಮುನ್ನ ಸುರೇಶ್ ಕಿರುಕುಳದ ಮಾಹಿತಿಯನ್ನು ನೀಡಿದ್ದರಿಂದ ಪೋಷಕರು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Comments are closed.