ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆದ ಮರುದಿನವೇ ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಕುಮಾರಸ್ವಾಮಿ ಅವರು ಸಿಂಗಾಪುರ್ಗೆ ಪ್ರಯಾಣಿಸಿದ್ದಾರೆ.
ಮತಗಟ್ಟೆ ಸಮೀಕ್ಷೆಗಳಲ್ಲಿ ಹೆಚ್ಚಿನ ಸಮೀಕ್ಷೆಗಳು ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಿಲ್ಲವಾದರೂ, 26–38 ಕ್ಷೇತ್ರಗಳಲ್ಲಿ ಜಯ ಸಾಧಿಸಲಿರುವ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೇಳಿವೆ. ಇದರ ಬೆನ್ನಲ್ಲೇ ಕುಮಾರಸ್ವಾಮಿ ಸಿಂಗಾಪುರ್ಗೆ ಪ್ರಯಾಣಿಸಿದ್ದು, ಮತ ಎಣಿಕೆ ದಿನವಾದ ಮಂಗಳವಾರ ವಾಪಸ್ ಬರಲಿದ್ದಾರೆ.
ಕಾಂಗ್ರೆಸ್, ಬಿಜೆಪಿ ನೇತಾರರು ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಭೇಟಿಯಾಗಿದ್ದಾರೆ. ರಾಜಕೀಯ ಚರ್ಚೆಗಳಿಗಾಗಿ ಕುಮಾರಸ್ವಾಮಿ ಸಿಂಗಾಪುರ್ಗೆ ಹೋಗಿರಬಹುದು. ರಾಜಕೀಯ ಚರ್ಚೆಗಳು ಇಲ್ಲಿ ನಡೆದರೆ ಅದು ಮಾಧ್ಯಮಗಳಿಗೆ ಸೋರಿಕೆಯಾಗುವ ಸಾಧ್ಯತೆ ಇದೆ ಎಂದು ಕುಮಾರಸ್ವಾಮಿಯವರ ಆಪ್ತರೊಬ್ಬರು ಹೇಳಿರುವುದಾಗಿ ನ್ಯೂಸ್ 18 ವರದಿ ಮಾಡಿದೆ.
ಅದೇ ವೇಳೆ ಈ ಬಗ್ಗೆ ಕೇಳಲು ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿದರೆ, ನಾನು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
Comments are closed.