ಕರ್ನಾಟಕ

ರಾಣೆಬೆನ್ನೂರಿನಲ್ಲಿ ಖಾತೆ ತೆರೆದ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದ ಅಭ್ಯರ್ಥಿ

Pinterest LinkedIn Tumblr


ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಪಕ್ಷೇತರ ಹಾಗೂ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದ ಅಭ್ಯರ್ಥಿಯೊಬ್ಬರು ಜಯಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಜೆಪಿ ಪಕ್ಷದ ಅಭ್ಯರ್ಥಿ ಆರ್ ಶಂಕರ್ ಗೆಲುವಿನ ನಗು ಬೀರಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ಹಿರಿಯ ಮುಖಂಡ ಕೆಬಿ ಕೋಳಿವಾಡ ಸೋಲಿನ ರುಚಿ ಕಂಡಿದ್ದಾರೆ.

2008ರಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಶಿವಣ್ಣ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಕಾಂಗ್ರೆಸ್ ನ ಕೆಬಿ ಕೋಳಿವಾಡ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.

ಮುಳಬಾಗಿಲು ಕ್ಷೇತ್ರದಲ್ಲಿ ಎಚ್ ನಾಗೇಶ್ ಗೆಲುವು:

ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಎಚ್.ನಾಗೇಶ್ ಅವರು ಜೆಡಿಎಸ್ ನ ಸಮೃದ್ಧಿ ಮಂಜುನಾಥ್ ಅವರ ವಿರುದ್ಧ ಗೆಲುವಿನ ನಗು ಬೀರಿದ್ದಾರೆ.

2013ರಲ್ಲಿ ಕಾಂಗ್ರೆಸ್ ಪಕ್ಷದ ಜಿ.ಮಂಜುನಾಥ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ಪಕ್ಷೇತರ ಅಭ್ಯರ್ಥಿ ಅಮರೇಶ್ ಜಯ ಸಾಧಿಸಿ ಶಾಸಕರಾಗಿದ್ದರು.

Comments are closed.