ಕರ್ನಾಟಕ

ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ಆಯ್ಕೆ ಪ್ರಶ್ನಿಸಿ ಸುಪ್ರಿಂಕೋರ್ಟ್‌ ಮೊರೆ ಹೋದ ಕಾಂಗ್ರೆಸ್

Pinterest LinkedIn Tumblr

ನವದೆಹಲಿ: ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಅವರನ್ನು ನೇಮಿಸಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮವನ್ನು ಕಾಂಗ್ರೆಸ್ ಪಕ್ಷವು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ಪಕ್ಷದ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘ್ವಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ತ್ವರಿತ ವಿಚಾರಣೆ ನಡೆಸಬೇಕು ಎಂದು ಕೋರಿದ್ದಾರೆ.

ಸುಪ್ರಿಂಕೋರ್ಟ್ ರಿಜಿಸ್ಟ್ರಾರ್ ಅರ್ಜಿ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಯಾವುದೇ ಕ್ಷಣದಲ್ಲಿ ವಿಚಾರಣೆಗೆ ಆದೇಶ ನೀಡಬಹುದಾಗಿದೆ.

ಇದಕ್ಕೂ ಮೊದಲು ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಶುಕ್ರವಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಕೆಜಿ ಬೋಪಯ್ಯ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಬೋಪಯ್ಯ ಅವರ ಉಸ್ತುವಾರಿಯಲ್ಲಿ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಹಾಗೂ ಬಹುಮತ ಸಾಬೀತು ಪ್ರಕ್ರಿಯೆ ನಡೆಯಲಿದೆ.

ವಿಶ್ವಾಸ ಮತಯಾಚನೆಯನ್ನು ರಹಸ್ಯ ಮತದಾನದ ಮೂಲಕ ಮಾಡಬೇಕೆಂದು ಬಿಜೆಪಿ ಬಯಸಿತ್ತು. ಆದರೆ, ಸುಪ್ರೀಂ ಕೋರ್ಟ್‌ ತನ್ನ ಲಿಖಿತ ಆದೇಶದಲ್ಲಿ, ನಾಳೆ ನಡೆಯುವ ವಿಶ್ವಾಸ ಮತ ಯಾಚನೆಯಲ್ಲಿ ರಹಸ್ಯ ಮತದಾನ ನಡೆಸಕೂಡದು ಎಂದು ಸೂಚಿಸಿದೆ.

Comments are closed.