ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರಿಗೆ ಪ್ರಧಾನಿ ಮೋದಿ ಅವರು ಶುಕ್ರವಾರ ಹುಟ್ಟು ಹಬ್ಬದ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, ” ಮಾಜಿ ಪ್ರಧಾನಿ ದೇವೇಗೌಡರಿಂದಿಗೆ ಮಾತನಾಡಿ, ಹುಟ್ಟು ಹಬ್ಬದ ಶುಭಾಶಯ ತಿಳಿಸಿದೆ. ಅವರಿಗೆ ಆರೋಗ್ಯ, ಆಯಸ್ಸು ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ,” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ದೇವೇಗೌಡರಿಗೆ ಶುಭಾಶಯ ಕೋರಿದ್ದರು.
ಇನ್ನೊಂದೆಡೆ, ತಮ್ಮ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ದೇವೇಗೌಡರು ಎಂದಿನಂತೆ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದಿದ್ದಾರೆ.
Comments are closed.