ಕರ್ನಾಟಕ

ರಾಮನಗರ: ಯೋಗೇಶ್ವರ್‌ ರನ್ನು ಕಣಕ್ಕಿಳಿಸಲು ಮುಂದಾಗಿರುವ ಬಿಜೆಪಿ

Pinterest LinkedIn Tumblr


ಬೆಂಗಳೂರು: ನಿಯೋಜಿತ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ನೀಡಲು ಮುಂದಾಗಿದ್ದು, ಮಾಜಿ ಸಚಿವ ಚನ್ನಪಟ್ಟಣ ಕ್ಷೇತ್ರದಲ್ಲಿ ಸೋತಿರುವ ಸಿ.ಪಿ.ಯೋಗೇಶ್ವರ್‌ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್‌ ಅವರು ಯೋಗೇಶ್ವರ್‌ ಅವರ ಮನವೊಲಿಸಲು ಮಾತುಕತೆಯನ್ನೂ ನಡೆಸುತ್ತಿದ್ದಾರೆ.

ಜೆಡಿಎಸ್‌ ಪ್ರಭಾವವಿರುವ ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರವಾಗಿರುವ ಹಿನ್ನಲೆಯಲ್ಲಿ ಯೋಗೇಶ್ವರ್‌ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.

ಈ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಎಚ್‌ಡಿಕೆ 92,626 ಮತಗಳನ್ನು ಗಳಿಸಿ 22,636 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಹುಸೇನ್‌ ಅವರನ್ನು ಸೋಲಿಸಿದ್ದರು. ಬಿಜೆಪಿಯ ಲೀಲಾವತಿ ಅವರು ಕೇವಲ 4,871 ಮತಗಳನ್ನು ಮಾತ್ರ ಪಡೆದಿದ್ದರು.

ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ಅವರು ಕುಮಾರಸ್ವಾಮಿ ವಿರುದ್ಧ 21,530 ಮತಗಳ ಅಂತರದಿಂದ ಸೋಲನ್ನಪ್ಪಿದ್ದರು.

2 ಕ್ಷೇತ್ರಗಳಲ್ಲಿ ಆಯ್ಕೆಯಾದ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

Comments are closed.