ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಹಿನ್ನೆಲೆಯಲ್ಲಿ ಮೇ 23ರಂದು ಬಿಜೆಪಿ ಕರಾಳ ದಿನ ಆಚರಣೆ ಮಾಡಲು ನಿರ್ಧರಿಸಿದೆ.
ನಾಳೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು ಬಿಜೆಪಿ ಕರಾಳದಿನ ಆಚರಣೆ ಮಾಡಲಿದೆ. ಬಿ.ಎಸ್.ಯಡಿಯೂರಪ್ಪ ಕೂಡ ಭಾಗಿಯಾಗಲಿದ್ದಾರೆ. ಅಲ್ಲದೆ, ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳಲ್ಲೂ ಬಿಜೆಪಿ ಕರಾಳ ದಿನ ಆಚರಣೆ ಮಾಡಲಿದೆ.
ಜಯನಗರ ಕ್ಷೇತ್ರದ ಅಭ್ಯರ್ಥಿ ಘೋಷಣೆ
ಬೆಂಗಳೂರು ಜಯನಗರ ಕ್ಷೇತ್ರದಿಂದ ಪ್ರಲ್ಹಾದ್ ಬಾಬು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಣೆ ಮಾಡಿದೆ. ಪ್ರಲ್ಹಾದ್ ಬಾಬು ದಿವಂಗತ ವಿಜಯ್ಕುಮಾರ್ ಅವರ ಸಹೋದರ.
Comments are closed.