ಚಿಂತಾಮಣಿ: ಬೆಂಗಳೂರಿನ ಹಲಸೂರಿನಲ್ಲಿ ಹೋಂಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಸುನೀಲ್ ಕುಮಾರ್ ಜೀವನದಲ್ಲಿ ಜಿಗುಪ್ಸೆಗೊಂಡು ಕ್ರಿಮಿನಾಶಕ ಮಾತ್ರೆ ಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಜೆ ಮೇಲೆ ತಮ್ಮ ಊರಾದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮಕ್ಕೆ ಬಂದಿದ್ದ ಸುನಿಲ್ ಕುಮಾರ್ ಕಳೆದ ರಾತ್ರಿ ತಮ್ಮ ಮನೆಯಲ್ಲಿ ವಿಷ ಸೇವಿಸುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ.
ಇದನ್ನು ಕಂಡ ಪೋಷಕರು ತಕ್ಷಣ ಮಾತ್ರೆ ಸೇವಿಸಿ ನಿತ್ರಾಣಗೊಂಡಿದ್ದ ಸುನೀಲ್ ಕುಮಾರ್ ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರು ಪ್ರಯೋಜನವಾಗದೇ ಸುನೀಲ್ ಮೃತಪಟ್ಟಿದ್ದಾರೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.