ಕರ್ನಾಟಕ

ಶಾಸಕ ಎನ್‌.ಎ ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ಜಾಮೀನು ನೀಡಲು ನಿರಾಕರಣೆ

Pinterest LinkedIn Tumblr


ಬೆಂಗಳೂರು: ಶಾಸಕ ಎನ್‌.ಎ ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ಬೆಂಗಳೂರು ಸೆಷನ್ಸ್‌ ನ್ಯಾಯಾಲಯ ಮತ್ತೆ ಜಾಮೀನು ನೀಡಲು ನಿರಾಕರಿಸಿದೆ.

ಫರ್ಜಿ ಕೆಫೆಯಲ್ಲಿ ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌, ಪ್ರಭಾವಿಯಾಗಿದ್ದು, ಸಾಕ್ಷ್ಯ ನಾಶಪಡಿಸುವ ಸಾಧ್ಯತೆಗಳು ಹೆಚ್ಚಿವೆ. ನ್ಯಾಯಾಲಯ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಹಿಂದೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ವೇಳೆ ನ್ಯಾಯಾಲಯ ಹಲ್ಲೆ ನಡೆಸಿದ ವೀಡಿಯೋ ದೃಶ್ಯಾವಳಿಗಳನ್ನು ಗಮನಿಸಿದ್ದು, ಅತ್ಯಂತ ಗಂಭೀರವಾಗಿರುವುದಾಗಿ ಅಭಿಪ್ರಾಯಪಟ್ಟಿದೆ. ಹೀಗಾಗಿ ನಲಪಾಡ್‌ ಜಾಮೀನು ಪಡೆಯಲು ಅರ್ಹವಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟು, ಅರ್ಜಿ ತಿರಸ್ಕರಿಸಿದೆ ಎಂದು ಸರಕಾರಿ ಅಭಿಯೋಜಕ ಶ್ಯಾಮಸುಂದರ್‌ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದರೂ, ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಮೂರು ತಿಂಗಳಿನಿಂದ ನಲಪಾಡ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾಮೀನು ನೀಡುವಂತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಲಪಾಡ್‌ ಹ್ಯಾರಿಸ್‌ಗೆ ಅವಕಾಶವಿರಲಿದೆ.

Comments are closed.