ಬೆಂಗಳೂರು: ಮಾಸ್ತಿಗುಡಿ ಸಿನಿಮಾ ಚಿತ್ರೀಕರಣ ವೇಳೆ ಖಳನಟರಿಬ್ಬರೂ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರ್ಮಾಪಕ ಸುಂದರ್ ಗೌಡ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ ಅವರು ಪರಾರಿಯಾಗಿದ್ದಾರೆ.
ರಾಮನಗರ ಜೆಎಂಎಫ್ಸಿ ನ್ಯಾಯಾಲಯ ಸುಂದರ್ ಗೌಡ ವಿರುದ್ಧ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ತಾವರೆಕೆರೆ ಪೊಲೀಸರು ಚನ್ನಮ್ಮಕೆರೆ ಅಚ್ಚುಕಟ್ಟು ನಗರದಲ್ಲಿರುವ ಅವರ ನಿವಾಸಕ್ಕೆ ನಿನ್ನೆ ಸಂಜೆ ತೆರಳಿದ್ದಾಗ ಸುಂದರ್ ಪರಾರಿಯಾಗಿದ್ದಾರೆ. ಪೊಲೀಸರು ಹೋದ ತಕ್ಷಣ ಬಟ್ಟೆ ಹಾಕಿಕೊಂಡು ಬರುತ್ತೇನೆ ಎಂದು ಹೇಳಿ ಹೋಗಿ ಅಲ್ಲಿಂದ ಓಡಿಹೋಗಿದ್ದಾರೆ.
ಈ ವೇಳೆ ನಟ ದುನಿಯಾ ವಿಜಯ್ ಹಾಜರಿದ್ದು ಮಧ್ಯಸ್ಥಿಕೆ ವಹಿಸಲು ಪ್ರಯತ್ನಿಸಿದರು. ಸುಂದರ್ ತಾಯಿಗೆ ಹುಷಾರಿಲ್ಲ. ಬೆಳಗ್ಗೆ ನಾನೇ ಕರೆದುಕೊಂಡು ಬರುತ್ತೇನೆ ಎಂದು ಹೇಳಿದರೂ ಪೊಲೀಸರು ಒಪ್ಪಲಿಲ್ಲ. ಪರಾರಿಯಾದ ಸುಂದರ್ಗಾಗಿ ಶೋಧಕಾರ್ಯ ನಡೆಯುತ್ತಿದೆ.
Comments are closed.