ಕರ್ನಾಟಕ

ಕುಮಾರಸ್ವಾಮಿ ಸಂಪುಟ ಸೇರಲು ನಿರಾಕರಿಸಿದ ದೇಶಪಾಂಡೆ​!

Pinterest LinkedIn Tumblr


ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್​ನ ಹಿರಿಯ ನಾಯಕ ಆರ್​.ವಿ ದೇಶಪಾಂಡೆ ಅವರು ಎಚ್​.ಡಿ ಕುಮಾರಸ್ವಾಮಿ ಅವರ ಸಂಪುಟ ಸೇರಲು ನಿರಾರಿಸಿದ್ದಾರೆ. ಅವರು ಬೇರೊಂದು ಮಹತ್ವದ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್​ನ ಹಿರಿಯ ನಾಯಕರಾಗಿರುವ ಆರ್​. ವಿ. ದೇಶಪಾಂಡೆ ಜನತಾ ಪರಿವಾರದ ಹಿನ್ನೆಲೆಯವರು. ರಾಮಕೃಷ್ಣ ಹೆಗಡೆ ಮತ್ತು ಎಚ್​.ಡಿ ದೇವೇಗೌಡ ಅವರ ಸಚಿವ ಸಂಪುಟದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ದೇಶಪಾಂಡೆ ಅವರು ಹಳಿಯಾಳ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಗೆದ್ದು ಬಂದಿದ್ದಾರೆ. ಸದ್ಯ ರಾಜ್ಯದಲ್ಲಿ ಜೆಡಿಎಸ್​-ಕಾಂಗ್ರೆಸ್​ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ದೇಶಪಾಂಡೆಯವರೂ ಸಂಪುಟ ಸೇರಬಹುದು ಎಂಬ ನಿರೀಕ್ಷೆಯನ್ನು ರಾಜ್ಯದ ಜನತೆ ಹೊಂದಿದ್ದಾರೆ. ಆದರೆ, ಎಚ್​ಡಿಕೆ ಅವರ ಸಂಪುಟ ಸೇರಲು ದೇಶಪಾಂಡೆ ನಿರಾರಿಸಿದ್ದಾರೆ ಎಂದು ಗೊತ್ತಾಗಿದೆ.

ರಾಮಕೃಷ್ಣ ಹೆಗಡೆ ಮತ್ತು ಕುಮಾರಸ್ವಾಮಿ ಅವರ ತಂದೆ ಎಚ್​.ಡಿ ದೇವೆಗೌಡರ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೀಗಾಗಿ ಎಚ್​​ಡಿಕೆ ಸಂಪುಟದಲ್ಲಿ ಕೆಲಸ ಮಾಡಲು ನನಗೆ ಇಷ್ಟವಿಲ್ಲ ಎಂದು ರಾಹುಲ್​ ಗಾಂಧಿ ಅವರ ಬಳಿ ಹೇಳಿಕೊಂಡಿರುವ ದೇಶಪಾಂಡೆ, ಇದಕ್ಕೆ ಪ್ರತಿಯಾಗಿ ಮಹತ್ವದ ಹುದ್ದೆಯನ್ನೇ ಕೇಳಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನದ ಬದಲಿಗೆ ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ದೇಶಪಾಂಡೆ ಅವರು ರಾಹುಲ್​ ಬಳಿ ಮನವಿ ಮಾಡಿದ್ದಾರೆ. ಅವರ ಮನವಿ ಕೇಳಿದ ರಾಹುಲ್​ ಅವರು ಗೊಂದಲಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ಏಕೆಂದರೆ, ಉಪಮುಖ್ಯಮಂತ್ರಿಯಾಗಿರುವ ಡಾ.ಜಿ ಪರಮೇಶ್ವರ್​ ಅವರಿಂದ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಡಿ.ಕೆ.ಶಿವಕುಮಾರ್​ ಮತ್ತು ಕೇಂದ್ರದ ಮಾಜಿ ಸಚಿವ ಕೆ.ಎಚ್​.ಮುನಿಯಪ್ಪ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಿರುವಾಗ ದೇಶಪಾಂಡೆ ಅವರು ಪಕ್ಷದ ಅಧ್ಯಕ್ಷ ಹುದ್ದೆ ಕೇಳುತ್ತಿರುವುದರಿಂದ ರಾಹುಲ್​ ಗೊಂದಲಕ್ಕೊಳಗಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Comments are closed.