ಕರ್ನಾಟಕ

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಸ್‌.ಆರ್‌.ಪಾಟೀಲ್‌

Pinterest LinkedIn Tumblr

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್‌.ಪಾಟೀಲ್‌ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿಗೆ ಇ–ಮೇಲ್‌ ಮುಖೇನ ರಾಜೀನಾಮೆ ರವಾನಿಸಿರುವುದಾಗಿ ತಿಳಿದು ಬಂದಿದೆ.

ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಯಾವ ನಾಯಕರ ಬಗ್ಗೆಯೂ ಅಸಮಾಧಾನ ಇಲ್ಲ. ಉತ್ತರ ಕನ್ನಡ ಭಾಗದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿರುವುದಾಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

Comments are closed.