ಕರ್ನಾಟಕ

ದಾಖಲಾತಿ ಕಡಿಮೆ ಇರುವ 28 ಸಾವಿರ ಸರ್ಕಾರಿ ಶಾಲೆಗಳು ಮುಚ್ಚುಗಡೆ

Pinterest LinkedIn Tumblr


ಬೆಂಗಳೂರು : ಒಂದು ಕಿಮೀ ವ್ಯಾಪ್ತಿಯಲ್ಲಿರುವ ಮತ್ತು ದಾಖಲಾತಿ ಕಡಿಮೆ ಇರುವ 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ 8,530 ಸರ್ಕಾರಿ ಶಾಲೆಗಳೊಂದಿಗೆ ವಿಲೀನಗೊಳಿಸುವುದಾಗಿ ಪ್ರಕಟಿಸಿದೆ.

ಪ್ರಸ್ತುತ ಆಯವ್ಯಯದಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಕಟ್ಟಡಗಳ ದುರಸ್ತಿಗಾಗಿ 150 ಕೋಟಿ ರು.ಗಳನ್ನು ಒದಗಿಸಲಾಗುತ್ತದೆ. ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಈಗಾಗಲೇ ಇಂಗ್ಲಿಷ್ ಮಾಧ್ಯಮ ಆರಂಭಿಸಲಾಗಿದೆ. ಇದರ ಜತೆಗೆ, ಆರಂಭಿಕ ಹಂತದಲ್ಲಿ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಪ್ರಾಯೋ ಗಿಕ ಹಂತವಾಗಿ ಪೂರ್ವ ಪ್ರಾಥಮಿಕ ತರಗತಿ (ಪ್ರಿಕೆಜಿ/ಎಲ್‌ಕೆಜಿ/ಯುಕೆಜಿ) ಆರಂಭಿ ಸಲಾಗುತ್ತದೆ.

ಶಾಲೆಗಳಲ್ಲಿ ಬಯೋಮೆಟ್ರಿಕ್

ಐದು ಕೋಟಿ ವೆಚ್ಚದಲ್ಲಿ ರಾಜ್ಯದ 48 ಸಾವಿರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಮತ್ತು ಮಕ್ಕಳ ಹಾಜರಾತಿ ನಿಗಾ ವಹಿಸಲು ಬಯೋಮೆಟ್ರಿಕ್ ಸಾಧನ ಅಳವಡಿಸಲಾಗುತ್ತದೆ. ಈ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿಗೊಳಿಸಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಳ ಮಾಡುವ ದೃಷ್ಟಿಯಿಂದ ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದ 4100 ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸಿ ‘ಬಾಲಸ್ನೇಹಿ ಕೇಂದ್ರ’ಗಳಾಗಿ ಬಲವರ್ಧಿಸಲಾಗುವುದು. ಹಂತ ಹಂತವಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದಾಗಿ ಪ್ರಕಟಿಸಿದೆ.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ತರಬೇತಿ ಕೇಂದ್ರಗಳಿಗೆ ಮೂಲ ಸೌಕರ್ಯ ಒದಗಿಸಿ ತರಬೇತಿ ಕೇಂದ್ರಗಳಾಗಿ ಬಲವರ್ಧಿ ಸುವುದಕ್ಕಾಗಿ ಐದು ಕೋಟಿ ರು. ಅನುದಾನ ಒದಗಿಸಲಾಗುತ್ತದೆ.

Comments are closed.