ಕರ್ನಾಟಕ

ಯಡಿಯೂರಪ್ಪರ ಮುಖ್ಯಮಂತ್ರಿ ಕನಸು ನನಸಾಗಲ್ಲ: ಸಿದ್ದರಾಮಯ್ಯ

Pinterest LinkedIn Tumblr


ಜಮಖಂಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಂಡಿದ್ದು, ಅದು ನನಸಾಗಲ್ಲ ಎಂದು ಬಾದಾಮಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಮಾತನಾಡಿ, ಯಡಿಯೂರಪ್ಪನವರು ಕಾಂಗ್ರೆಸ್‌ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದ್ದಾರೆ. ಆದರೆ, ಅವರು ಹೆಣೆದಿರುವ ಬಲೆಗೆ ಕಾಂಗ್ರೆಸ್‌ ಶಾಸಕರು ಬೀಳಲ್ಲ ಎಂದರು. ರಾಜ್ಯದಲ್ಲಿ ಕೋಮುವಾದಿ ಬಿಜೆಪಿ ಅಧಿ ಕಾರಕ್ಕೆ ಬರಬಾರದೆಂದು ಜೆಡಿಎಸ್‌ ಪಕ್ಷದೊಂದಿಗೆ ಸರ್ಕಾರ ರಚಿಸಲಾಗಿದೆ. ಮುಂಬರುವ ಲೋಕಸಭೆಯಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ. ರಾಹುಲ್‌ ಗಾಂ ಧಿ ಪ್ರಧಾನಿಯಾಗಿ ಅಧಿಕಾರದ ಚುಕ್ಕಾಣೆ ಹಿಡಿಯುವುದು ಖಚಿತ ಎಂದು ಭವಿಷ್ಯ ನುಡಿದರು.

ಯುದ್ಧ ವಿಮಾನ ಖರೀದಿಗೆ ಅಗ್ರಿಮೆಂಟ್‌ ಮಾಡಿಕೊಂಡ ಕೇಂದ್ರ ಸರ್ಕಾರ 40 ಸಾವಿರ ಕೋಟಿ ರೂ. ಅವ್ಯವಹಾರ ನಡೆಸಿದೆ. ರಕ್ಷಣಾ ಇಲಾಖೆಯಲ್ಲಿ ಇಷ್ಟೊಂದು ಪ್ರಮಾಣದ ಭ್ರಷ್ಟಾಚಾರ, ಹಗರಣ ನಡೆದಿರುವುದು ಇದೇ ಮೊದಲು. ಇಷ್ಟೊಂದು ಹಣದ ವ್ಯವಹಾರ ನಡೆಸುವ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ ಎಂದು ಲೇವಡಿ ಮಾಡಿದರು.

ಆನಂದ ನ್ಯಾಮಗೌಡ ಸ್ಪರ್ಧೆ: ರಸ್ತೆ ಅಪಘಾತದಲ್ಲಿ ನಿಧನರಾದ ಜಮಖಂಡಿ ಮತಕ್ಷೇತ್ರದ ಶಾಸಕ ದಿ| ಸಿದ್ದು ನ್ಯಾಮಗೌಡರು ಸಮಾಜಕ್ಕೆ ನೀಡಿರುವ ಸೇವೆ ಅಪಾರ. ವಿಧಾನಸಭಾ ಉಪಚುನಾವಣೆಯಲ್ಲಿ ಅವರ ಪುತ್ರ ಆನಂದ ನ್ಯಾಮಗೌಡ ಸ್ಪ ರ್ಧಿಸಲಿದ್ದಾರೆ. ಅವರ ಗೆಲುವಿಗೆ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಕನ್ನಡ ನಾಡಿನಲ್ಲಿ ನಾನು 100 ವರ್ಷಗಳ ಕಾಲ ಜೀವಂತವಾಗಿ ಬದುಕುವೆ. ಹುಟ್ಟು-ಸಾವು ನಡುವೆ ಸಮಾಜಕ್ಕೆ ಕೊಡುಗೆ ನೀಡುವೆ.
– ಸಿದ್ದರಾಮಯ್ಯ, ಬಾದಾಮಿ ಶಾಸಕ.

Comments are closed.