ಕರ್ನಾಟಕ

ಕೆಂಪು ರಕ್ತದೋಕುಳಿಯ ನರ್ತನದಲ್ಲಿ ರಾಕಿ ಆರ್ಭಟ: ಬಹುನಿರೀಕ್ಷಿತ ಕೆಜಿಎಫ್ ಟ್ರೇಲರ್ ಬಿಡುಗಡೆ

Pinterest LinkedIn Tumblr


ಬೆಂಗಳೂರು: ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾದ ಟ್ರೇಲರ್ ಇಂದು ರಿಲೀಸ್ ಆಗಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಕಳೆದ ಎರಡೂವರೆ ವರ್ಷಗಳಿಂದ ತೀವ್ರ ಕುತೂಹಲವನ್ನು ಹುಟ್ಟುಹಾಕಿತ್ತು. ಕನ್ನಡದ ವಿಭಿನ್ನ ಸಿನಿಮಾ ಎಂದು ಕೆಜಿಎಫ್ ಗುರುತಿಸಿಕೊಳ್ಳುತ್ತಿದೆ. ಸಿನಿಮಾ ಬಿಡುಗಡೆ ಮುನ್ನವೇ ಇಡೀ ದೇಶವೇ ಕನ್ನಡ ಸಿನಿಮಾಗಳತ್ತ ನೋಡುವಂತೆ ಮಾಡಿದೆ ಕೆಜಿಎಫ್.

ಭೂಗತ ಲೋಕದ ಕರಾಳ ಸತ್ಯವನ್ನು ಕೆಜಿಎಫ್ ತೋರಿಸಲಿದೆ ಎಂಬುವುದನ್ನು ಟ್ರೇಲರ್ ಸಾರಿ ಸಾರಿ ಹೇಳುತ್ತಿದೆ. ಓರ್ವ ಕಥಾನಾಯಕನ ಜೀವನದ ಏರುಪೇರುಗಳನ್ನು ತುಂಬಾ ಸ್ಪಷ್ಟವಾಗಿ ಪ್ರಶಾಂತ್ ನೀಲ್ ತೋರಿಸುವ ಪ್ರಯತ್ನ ಟ್ರೇಲರ್ ನಲ್ಲಿ ಕಾಣುತ್ತಿದೆ. ಇನ್ನು ಟೀಸರ್ ಆರಂಭದಲ್ಲಿ ಕೇಳಿಬರುವ ಹಿನ್ನೆಲೆ ಧ್ವನಿ ಟ್ರೇಲರ್ ನಲ್ಲಿ ನೋಡುಗರಲ್ಲಿ ರೋಮ ರೋಮಗಳಲ್ಲಿ ರೋಮಾಂಚನ ಮಾಡುವಲ್ಲಿ ಯಶ್ವಸಿಯಾಗಿದೆ.

1951ರಂದು ಕೋಲಾರದಲ್ಲಿ ಆರಂಭವಾಗುವ ಚಿತ್ರಕಥೆ, ಮುಂಬೈನತ್ತ ಸಾಗಿ ಬರುತ್ತೇವೆ. ಮುಂಬೈ ಭೂಗತ ಲೋಕದ ಬಾದ್ ಶಾ ಆಗುವ ರಾಕಿ ಕೆಜಿಎಫ್‍ಗೆ ಹೇಗೆ ಬರುತ್ತಾನೆ. ಮುಂಬೈನಲ್ಲಿ ಡಾನ್ ನಾಗಿ ಬೆಳೆಯುವ ರಾಕಿ ಕೋಲಾರದ ಕೆಜಿಎಫ್ ಗೆ ಹೇಗೆ ಬರುತ್ತಾನೆ. ಆತನ ಮೂಲ ಕಥೆ ಏನೆಂಬುದನ್ನು ನೀವು ಸಿನಿಮಾದಲ್ಲಿ ಕಾಣಬಹುದು. ಆದ್ರೆ ಟ್ರೇಲರ್ ನಲ್ಲಿ ಎಲ್ಲವನ್ನು ತಿಳಿಸಿರುವ ನಿರ್ದೇಶಕ ಕಥೆಯ ಮೂಲವನ್ನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ.

ಹಲವು ವಿಶೇಷತೆಗಳಿಂದ ಕೂಡಿರುವ ಸಿನಿಮಾ ಕೋಲಾರ ಜಿಲ್ಲೆಯ ಕೆಜಿಎಫ್ ಚಿನ್ನದ ಗಣಿ ಕಾರ್ಮಿಕ ವರ್ಗದ ಜೀವನಾಧರಿತ ಕಥೆಯನ್ನು ಒಳಗೊಂಡಿದೆ. ಬೇರೆ ಭಾಷೆಯ ಸಿನಿಮಾಗಳ ಟ್ರೇಲರ್ ರಿಲೀಸ್ ದಿನ ಬೇರೆ ರಾಜ್ಯಗಳಿಗೆ ತೆರಳಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಬೇಕಿತ್ತು. ಇದೇ ಮೊದಲ ಬಾರಿಗೆ ಬೇರೆ ಭಾಷೆಯವರು ಕನ್ನಡದ ಕೆಜಿಎಫ್ ಸಿನಿಮಾ ಟ್ರೇಲರ್ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಜನವರಿ 8, 2018ರಂದು ಚಿತ್ರ ಯಶ್ ಹುಟ್ಟುಹಬ್ಬದ ಪ್ರಯುಕ್ತ ಕೆಜಿಎಫ್ ಟೀಸರ್ ಬಿಡುಗಡೆ ಮಾಡುವ ಮೂಲಕ ರಾಕಿಂಗ್ ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ನೀಡಿದ್ದರು. ಅಖಂಡ ಎರಡು ವರ್ಷಗಳ ಕಾಲ ಚಿತ್ರೀಕರಣಗೊಂಡಿರೋ ಕೆಜಿಎಫ್ ಚಿತ್ರ ಬಿಡುಗಡೆಯ ಹಂತ ತಲುಪಿಕೊಂಡಿದೆ. ಎರಡು ವರ್ಷದ ಸುದೀರ್ಘಾವಧಿಯ ತುಂಬಾ ಈ ಚಿತ್ರ ಹುಟ್ಟಿಸಿರೋ ನಿರೀಕ್ಷೆ ಸಣ್ಣದೇನಲ್ಲ. ಯಶ್ ಅಭಿನಯದ ಈ ಚಿತ್ರವೀಗ ಬಾಲಿವುಡ್ ಚಿತ್ರಗಳನ್ನೇ ಹಿಂದಿಕ್ಕಿ ಟ್ರೆಂಡ್ ಸೆಟ್ ಮಾಡಿದೆ.

ಪಂಚ ಭಾಷೆಗಳಲ್ಲಿ ತಯಾರಾಗಿರುವ ಕೆಜಿಎಫ್ ಚಿತ್ರದ ಶೂಟಿಂಗ್ ಮೈಸೂರು, ಕೋಲಾರ, ಮುಂಬೈ, ಚೆನ್ನೈ, ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ನಡೆಸಲಾಗಿದೆ. ಈ ಚಿತ್ರದ ವಿತರಣಾ ಹಕ್ಕನ್ನು ಅನಿಲ್ ತಡಾನಿ, ರಿತೇಶ್ ಸಿದ್ವಾನಿ, ಫರ್ಹಾನ್ ಅಕ್ತರ್ ತೆಗೆದುಕೊಂಡಿದ್ದು ದೇಶಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಲಿದೆ. ಬಾಹುಬಲಿ ಎಂಬ ಕಾನ್ಸೆಪ್ಟ್ ಮಾಡಿ, ಎಲ್ಲಾ ಭಾಷೆಗೂ ಇದು ಅನ್ವಯವಾಗುತ್ತೆ ಅಂತ ಹೇಳಿಕೊಟ್ಟ ರಾಜಮೌಳಿ ಅವರ ಹಾದಿಯನ್ನ ನಾವು ಅನುಕರಿಸುತ್ತಿದ್ದೇವೆ. ಕೆಜಿಎಫ್ ಸಿನಿಮಾ ಕೂಡ ಯೂನಿವರ್ಸಲ್ ಕಾನ್ಸೆಪ್ಟ್. ಆದ್ದರಿಂದ ಎಲ್ಲಾ ಭಾಷೆಯಲ್ಲಿ ಬಿಡುಗಡೆ ಮಾಡೋದಕ್ಕೆ ಜಗತ್ತಿನಾದ್ಯಂತ ತೆರೆಗೆ ತರೋದಕ್ಕೆ ಪ್ಲ್ಯಾನ್ ಮಾಡಿದ್ದೇವೆ ಎಂದು ನಿರ್ದೇಶಕ ಪ್ರಶಾಂತ್ ನೀಲ್ ಈ ಹಿಂದೆ ಹೇಳಿದ್ದರು.

ಕೆಜಿಎಫ್ ಕಥೆ ಯೂನಿವರ್ಸಲ್ ಕಾನ್ಸೆಪ್ಟ್ ಆಗಿದ್ದು, ತಾಯಿ-ಮಗನ ಸೆಂಟಿಮೆಂಟ್ ಇಲ್ಲಿದೆ. ಸಿನಿಮಾದಲ್ಲಿ ಬಹುತೇಕ ಕಲಾವಿದರೆಲ್ಲರೂ ಹೊಸಬರೇ ಆಗಿದ್ದು, ಸಿನಿಮಾದ ಪ್ರತಿಯೊಂದು ಪಾತ್ರಕ್ಕೂ ಮಹತ್ವವಿದೆ. ಇಲ್ಲಿ ನಾನು ಮಾತ್ರ ಹೈಲೆಟ್ ಆಗಿಲ್ಲ, ಪ್ರತಿಯೊಂದು ಪಾತ್ರಕ್ಕೂ ಅದರದ್ದೇ ಆದ ಮಹತ್ವವಿದೆ ಎಂಬುವುದು ಯಶ್‍ಗೆ ಚಿತ್ರದ ಬಗೆಗಿರುವ ಅಭಿಪ್ರಾಯ.

ಸಿನಿಮಾದಲ್ಲಿ ಯಶ್ `ರಾಕಿ’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡರೆ ಶ್ರೀನಿಧಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಖಳ ನಟನಾಗಿ ರವಿಶಂಕರ್ ಸಹೋದರ ಅಯ್ಯಪ್ಪ ಅಭಿನಯಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿಬಂದಿದ್ದು, ವಿಜಯ್ ಕಿರಂಗದೂರ್ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ, ಉಗ್ರಂ ಖ್ಯಾತಿಯ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿದ್ದಾರೆ.

Comments are closed.