ಕರ್ನಾಟಕ

ರಾಜ್ಯ ಬಜೆಟ್ 2019 ರ ಏರಿಕೆ ಮತ್ತು ಇಳಿಕೆಯ ಪಟ್ಟಿ

Pinterest LinkedIn Tumblr

ಬೆಂಗಳೂರು, ಫೆಬ್ರವರಿ 08: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರದಂದು ಮಂಡಿಸಿದ ಬಜೆಟ್ ನಲ್ಲಿ ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ನಿರೀಕ್ಷಿಸಿದಂತೆ ಹೆಚ್ಚಿನ ಅನುದಾನ ಸಿಕ್ಕಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಿ ಆರ್ಥಿಕ ಸುಸ್ಥಿರತೆಗೆ ಆದ್ಯತೆ ನೀಡಲಾಗಿದೆ, ಕುಮಾರಸ್ವಾಮಿ ಅವರು ತಮ್ಮ ಮೊದಲ ಬಜೆಟ್ ನಲ್ಲಿ ಘೋಷಿಸಿದ ಜನಪ್ರಿಯ ಯೋಜನೆಗಳು ಮುಂದುವರೆಸಿಕೊಂಡು ಹೋಗಲಾಗಿದೆ. ರೈತರ ಸಾಲಮನ್ನಾ ಹಾಗೂ ಯೋಜನೆಗಳಿಗೆ ಹಣ ಸಂಗ್ರಹ ಮಾಡುವ ಉದ್ದೇಶದಿಂದ ನಿರೀಕ್ಷೆಯಂತೆ ಮದ್ಯಪಾನ ಪ್ರಿಯರಿಗೆ ಆಘಾತ ನೀಡಿದ್ದಾರೆ.

ಯಾವುದು ಏರಿಕೆ?:

* ಬಿಯರ್, ಡ್ರಾಟ್ ಬಿಯರ್, ಮೈಕ್ರೋ ಬ್ರಿವರಿಯಲ್ಲಿ ತಯಾರಾಗುವ ಬಿಯರ್ ಹಾಗೂ ಲೋ ಆಲ್ಕೋಹಾಲಿಕ್ ಬಿವೆರೇಜಸ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಳ.
* ಮದ್ಯದ ಮೇಲಿನ ಅಬಕಾರಿ ಸುಂಕ ಶೇ4ರಷ್ಟು ಹೆಚ್ಚಳ.

* ಅಬಕಾರಿ ಸುಂಕ 17 ಸ್ಲ್ಯಾಬ್ ಗಳಿಗೆ ಶೇ 15 ರಿಂದ ಶೇ 34ಕ್ಕೆ ಏರಿಕೆ

* ಮದ್ಯ, ತಂಬಾಕು ಉತ್ಪನ್ನಗಳು, ಸಿಗರೇಟು, ಬೀಡಿ ಬೆಲೆ ಈ ಹಿಂದಿನ ಬಜೆಟ್ ನಂತೆ ಜಾರಿಗೆ.

ಕಳೆದ ಬಜೆಟ್ ನಲ್ಲಿ ಪ್ರಸ್ತಾವಿತ ತೆರಿಗೆ ಈ ಬಾರಿಯೂ ಜಾರಿ:

* ಡೀಸೆಲ್ ಮೇಲಿನ 19 ರಿಂದ 22 ರಷ್ಟು ಸೆಸ್ ಏರಿಕೆ, ಡೀಸೆಲ್ ಪ್ರತಿ ಲೀಟರ್ ಬೆಲೆ 1.12 ರು ಏರಿಕೆ

ಕರ್ನಾಟಕ ಬಜೆಟ್ ಅಧಿವೇಶನ, ಎಚ್ಡಿಕೆ ಬಜೆಟ್ ಮಂಡನೆ, ಬಿಜೆಪಿ ಪ್ರತಿಭಟನೆ : ಚಿತ್ರಗಳು

* ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಶೇ 30ರಿಂದ 32ಕ್ಕೇರಿಕೆ, ಪೆಟ್ರೋಲ್ ಬೆಲೆ 1.14 ರು ಏರಿಕೆ

* ಖಾಸಗಿ ಸೇವಾ ವಾಹನ ತೆರಿಗೆಯನ್ನು ಪ್ರತಿ ಚದರ ಮೀಟರ್​ಗೆ ಶೇ.50ರಷ್ಟು ಹೆಚ್ಚಳ

* ವಿದ್ಯುತ್ ದರ ಹೆಚ್ಚಳ ಪ್ರತಿ ಯೂನಿಟ್ ಮೇಲೆ 10ರಿಂದ 20 ಪೈಸೆ ಏರಿಕೆ.

* ವಿದ್ಯುತ್ ಮೇಲಿನ ತೆರಿಗೆ ಶೇ.6ರಿಂದ ಶೇ.9ಕ್ಕೆ ಏರಿಕೆ

ಯಾವುದು ಇಳಿಕೆ?

* ಸಿರಿಧಾನ್ಯಗಳಾದ ನವಣೆ, ಸಾಮೆ, ಅರಕ ಹಾಗೂ ಬರಗು ಮೇಲಿನ ಹಿಟ್ಟುಗಳಿಗೆ ತೆರಿಗೆ ವಿನಾಯಿತಿ.

* ದ್ವಿದಳ ಧಾನ್ಯ, ತೆಂಗಿನ ಕಾಯಿ ಸಿಪ್ಪೆಯ ಮೇಲಿನ ತೆರಿಗೆ ವಿನಾಯಿತಿ ಮುಂದುವರಿಕೆ

Comments are closed.