ಕರ್ನಾಟಕ

ಸಿಎಲ್​ಪಿ ಸಭೆಗೆ ಶಾಸಕರ ಗೈರು; ದಿಲ್ಲಿಗೆ ಬರುವಂತೆ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್

Pinterest LinkedIn Tumblr

ಬೆಂಗಳೂರು: ಇಂದು ನಡೆದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಗೆ ಅತೃಪ್ತ ಶಾಸಕರು ಗೈರಾದ ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಬರುವಂತೆ ಕಾಂಗ್ರೆಸ್​ ಹೈಕಮಾಂಡ್​ ಸೂಚನೆ ನೀಡಿದೆ. ಹೈಕಮಾಂಡ್ ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಕಾಂಗ್ರೆಸ್​ ಶಾಸಕಾಗ ಪಕ್ಷದ ಮುಖಂಡರ ಸಭೆಯಲ್ಲಿ ಸಿದ್ಧರಾಮಯ್ಯ ಭಾಗಿಯಾಗಲಿದ್ದಾರೆ. ಸಿಎಲ್​ಪಿ ಸಭೆಗೆ ರೆಬೆಲ್ಸ್ ಶಾಸಕರು ಗೈರಾದ ವಿಚಾರಕ್ಕೆ ಹೈಕಮಾಂಡ್ ಅಸಮಾಧಾನಗೊಂಡಿದೆ. ಮೈತ್ರಿ ಸರ್ಕಾರದಲ್ಲಾಗುತ್ತಿರುವ ಬೆಳವಣಿಗೆ ಮಾಹಿತಿ ಪಡೆಯಲು ಹಾಗೂ ಮುಂದಿನ ನಡೆಯ ಬಗ್ಗೆ ಇದೇ ವೇಳೆ ಚರ್ಚಿಸಲಿದೆ.

ಸಮ್ಮಿಶ್ರ ಸರ್ಕಾರದ ಎರಡನೇ ಬಜೆಟ್​ ಇಂದು ಮಂಡನೆಯಾಯಿತು. ಆಯವ್ಯಯ ಮಂಡನೆಗೂ ಮುನ್ನ ಕಾಂಗ್ರೆಸ್​ ಶಾಸಕರನ್ನು ಅಧಿವೇಶನಕ್ಕೆ ಬರಮಾಡಿಕೊಳ್ಳಲು ಇಂದು ಸಿಎಲ್​ಪಿ ಸಭೆ ನಡೆಸಿತ್ತು. ಸಭೆಗೆ ಗೈರಾದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರೂ ಅತೃಪ್ತ ಶಾಸಕರು ಸಭೆಗೆ ಗೈರಾದರು. ಮುಂದಿನ ದಿನಗಳಲ್ಲಿ ಅತೃಪ್ತ ಶಾಸಕರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಬಹುದು ಎಂಬುದನ್ನು ಕಾಂಗ್ರೆಸ್​ ಅಧ್ಯಕ್ಷ ನಾಳೆ ರಾಹುಲ್ ಗಾಂಧಿ ನಿರ್ಧರಿಸುವ ಸಾಧ್ಯತೆ ಇದೆ.

Comments are closed.