ಮಂಡ್ಯ/ ಹಾಸನ: ನನಗೆ ಮದುವೆ ಮಾಡಲು ಹೆಣ್ಣು ಹುಡುಕುತ್ತಿದ್ದಾರೆ. ಮಂಡ್ಯದಲ್ಲೇ ಹೆಣ್ಣು ಸಿಕ್ಕರೆ ಮದುವೆ ಆಗುತ್ತೇನೆ ಎಂದು ಮೃತ್ರಿ ಸರ್ಕಾರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಮಾರ್ಚ್ 25 ರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ.ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಎಲ್ಲ ಕಾರ್ಯಕರ್ತರು ಬಂದು ನನಗೆ ಆಶೀರ್ವದಿಸಿ ಬೆಂಬಲಿಸಬೇಕು. ಮಂಡ್ಯ ಜಿಲ್ಲೆಯ ಜನರು ಕೂಡ ಬಂದು ಸಪೋರ್ಟ್ ಮಾಡಿ ಎಂದು ಮನವಿ ಮಾಡಿಕೊಂಡರು.
ನಿಖಿಲ್ ಅವರು ಮಂಡ್ಯ ಅಳಿಯ ಆಗ್ತಾರೆ ಎಂದು ಶಾಸಕ ಸುರೇಶ್ ಗೌಡ ಅವರು ಹೇಳಿದ್ದರು. ಈ ಬಗ್ಗೆ ನಿಖಿಲ್ ಪ್ರತಿಕ್ರಿಯಿಸಿ, ಅವರು ಯಾವ ಅರ್ಥದಲ್ಲಿ ಹೇಳಿದರು ಗೊತ್ತಿಲ್ಲ. ಅವರನ್ನೇ ಕೇಳುತ್ತೇನೆ. ನಮ್ಮ ತಂದೆ-ತಾಯಿ ಮದುವೆ ಮಾಡಬೇಕು ಎಂದು ಹೆಣ್ಣು ಹುಡುಕುತ್ತಿದ್ದಾರೆ. ನಮ್ಮ ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಸಿಕ್ಕಿದ್ರೂ ಮದುವೆ ಆಗುತ್ತೀನಿ ಎಂದು ಹೇಳಿದ್ರು.
ಇನ್ನೂ ಹಾಸನದಲ್ಲಿ ಭರ್ಜರಿ ರೋಡ್ ಶೋ ಮೂಲಕ ಸಾಗಿಬಂದ ಪ್ರಜ್ವಲ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಮೆರವಣಿಗೆಯಲ್ಲಿ ಹಾಸನ ಜಿಲ್ಲಾಧಿಕಾರಿ ಕಛೇರಿಗೆ ಬಂದು ಅಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಪ್ರಜ್ವಲ್ ಅವರ ನಮಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸಹಿತ ಸಚಿವ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಸಾಕ್ಷಿಯಾದರು. ನಾಮಪತ್ರ ಸಲ್ಲಿಕೆಗೂ ಮೊದಲು ಪ್ರಜ್ವಲ್ ರೇವಣ್ಣ ಅವರು ತಂದೆ, ತಾಯಿ ಮತ್ತು ಚಿಕ್ಕಪ್ಪ ಕುಮಾರಸ್ವಾಮಿ ಅವರಿಗೆ ನಮಿಸಿದ್ದು ವಿಶೇಷವಾಗಿತ್ತು.
ಕರ್ನಾಟಕ
Comments are closed.