ಕರ್ನಾಟಕ

ರಾಜಕೀಯ ವಿಚಾರಕ್ಕೆ ತಲೆ ಹಾಕುವುದಿಲ್ಲ: ನಟ ಸುದೀಪ್

Pinterest LinkedIn Tumblr


ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದ್ರೆ ಕಿಚ್ಚ ಸುದೀಪ್ ಯಾವುದೇ ಕಾರಣಕ್ಕೂ ರಾಜಕೀಯ ವಿಚಾರಕ್ಕೆ ತಲೆಹಾಕಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

ನಾನು ಯಾರ ಪರವೂ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲ್ಲ. ಸದ್ಯ ನಾನು ಕೋಟಿಗೊಬ್ಬ-3 ಶೂಟಿಂಗ್‍ಗಾಗಿ ಹೈದ್ರಾಬಾದ್‍ನಲ್ಲಿದ್ದೇನೆ. ಬಳಿಕ ದಬಾಂಗ್-3 ಶೂಟಿಂಗ್‍ಗೆ ತೆರಳಲಿದ್ದೇನೆ ಎಂದು ಸುದೀಪ್ ಆಪ್ತವಲಯ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದೆ.

ಲೋಕಸಭಾ ಚುನಾವಣೆ ಶುರುವಾದ ದಿನದಿಂದಲೂ ಸುದೀಪ್ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಆದರೆ ಸುದೀಪ್ ನಾನು ಯಾರ ಪರವಾಗಿಯೂ ಪ್ರಚಾರ ಮಾಡುತ್ತಿಲ್ಲ. ನಾನು ಸಿನಿಮಾಗಳಲ್ಲಿ ಬ್ಯುಸಿಯಾಗಿರುತ್ತೇನೆ. ಹಾಗಾಗಿ ಯಾರ ಪರವಾಗಿಯೂ ಪ್ರಚಾರ ಮಾಡುವುದಿಲ್ಲ ಎಂದು ಈ ಹಿಂದೆ ಹೇಳಿದ್ದರು.

ಈಗ ನಿಖಿಲ್ ಪರವಾಗಿ ಪ್ರಚಾರ ಮಾಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸುದೀಪ್ ಅವರು ಕೋಟಿಗೊಬ್ಬ- 3 ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್‍ನಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಅವರು ಈ ಚುನಾವಣೆಯಿಂದ ದೂರ ಇರಲಿದ್ದಾರೆ ಎಂದು ಸುದೀಪ್ ಆಪ್ತ ವಲಯ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದೆ.

ಸುದೀಪ್‍ಗೆ ನಿಖಿಲ್ ಹಾಗೂ ಸುಮಲತಾ ಇಬ್ಬರೂ ಆಪ್ತರಾಗಿದ್ದಾರೆ. ಹೀಗಾಗಿ ಒಬ್ಬರ ಪರವಾಗಿ ಪ್ರಚಾರ ಮಾಡಿದರೆ ಇನ್ನೊಬ್ಬರಿಗೆ ಬೇಸರವಾಗುತ್ತದೆ ಎಂಬ ಕಾರಣಕ್ಕೆ ಸುದೀಪ್ ಈ ಚುನಾವಣೆಯ ಪ್ರಚಾರದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

Comments are closed.