ವಿಜಯಪುರ: ಚುನಾವಣೆಯಲ್ಲಿ ನಿಖಿಲ್ ಗೆಲ್ಲಲ್ಲ, ಅವರ ಸಿನಿಮಾ ಓಡಲ್ಲ. ಮೇ 23ರ ಬಳಿಕ ನಿಖಿಲ್ ನಿರುದ್ಯೋಗಿ ಆಗೋದು ಪಕ್ಕಾ. ಆ ನಂತರ ಕುಮಾರಸ್ವಾಮಿ ನಿಖಿಲ್ರನ್ನು ಸೇನೆಗೆ ಸೇರಿಸಲಿ. ಆಗ ಅಲ್ಲಿನ ಪರಿಸ್ಥಿತಿ ಹೇಗಿರಲಿದೆ ಎಂದು ತಿಳಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಿಎಂ ಎಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.
ವಿಜಯಪುರದ ಐಶ್ವರ್ಯ ನಗರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಭಾ ಭವನದಲ್ಲಿ ನಡೆದ ಮೋದಿ ಮತ್ತೊಮ್ಮೆ ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಸೈನಿಕರು ಎಂದೂ ಶತ್ರುಗಳ ಗುಂಡಿಗೆ ಬೆನ್ನು ಕೊಟ್ಟಿಲ್ಲ. ಬೆನ್ನಿಗೆ ಗುಂಡು ಬಿದ್ದು ಹುತಾತ್ಮರಾದ ಉದಾಹರಣೆಯೇ ಇಲ್ಲ. ಸೈನಿಕರು ಗುಂಡಿಗೆ ಎದೆಯೊಡ್ಡಿದ್ದಾರೆ. ಭಾರತೀಯ ಸೈನಿಕರ ಬಗ್ಗೆ ದೇಶವೇ ಗೌರವ ನೀಡುತ್ತದೆ ಎಂದರು.
ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಭಾಗವಹಿಸಿದ್ದರು
Comments are closed.