ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಾಜ್ಯದಲ್ಲಿ ಕೆಲವು ಘಟಾನುಘಾಟಿ ನಾಯಕರು ನೆಲೆಕಚ್ಚಿದ್ದು ಮತ್ತೆ ಕೆಲವರು ಮೊದಲ ಬಾರಿಯ ಚುನಾವಣೆಯಲ್ಲಿ ಜಯಬೇರಿ ಬಾರಿಸುವ ಲೋಕಸಭಾಗೆ ಎಂಟ್ರಿಕೊಟ್ಟಿದ್ದಾರೆ.
ಸುಮಲತಾ ಅಂಬರೀಶ್- ಪಕ್ಷೇತರ, ಬಿಜೆಪಿ ಬೆಂಬಲಿತ ಅಭ್ಯರ್ಥಿ
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಮೊದಲ ಬಾರಿ ಚುನಾವಣಾ ಎದುರಿಸಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೋಲಾಗಿದೆ.
ತೇಜಸ್ವಿ ಸೂರ್ಯ ಬಿಜೆಪಿ ಅಭ್ಯರ್ಥಿ
ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ದಿವಗಂತ ಅನಂತ್ ಕುಮಾರ್ ಅವರ ಮರಣದ ಬಳಿಕ ಆ ಕ್ಷೇತ್ರಕ್ಕೆ ಬಿಜೆಪಿಯು ಹೊಸಮುಖ ತೇಜಸ್ವಿ ಸೂರ್ಯ ಅವರನ್ನು ಕಣಕ್ಕೆ ಇಳಿಸಿತ್ತು. ಈ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರು ಜಯಗಳಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಹರಿಪ್ರಸಾದ್ ಸೋಲು ಕಂಡಿದ್ದಾರೆ.
ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿ
ಅಷ್ಟೇ ಅಲ್ಲದೇ ಜೆಡಿಎಸ್ ಭದ್ರಕೋಟೆ ಹಾಸನ ಕ್ಷೇತ್ರ ಹೆಚ್.ಡಿ ದೇವೇಗೌಡರು ಪ್ರತಿನಿಧಿಸುತ್ತಿದ್ದರು ಆದರೆ ಈ ಸಲ ಆಸ್ಥಾನವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟಿದ್ದರು. ಈ ಕ್ಷೇತ್ರದಲ್ಲಿ ಅವರು ಪ್ರಜ್ವಲ್ ಗೆಲುವು ಸಾಧಿಸುವ ಮೂಲಕ ಜೆಡಿಎಸ್ ರಾಜ್ಯದಲ್ಲಿ ಒಂದೇ ಒಂದು ಸ್ಥಾನ ಉಳಿಸಿಕೊಂಡಿದೆ. ಬಿಜೆಪಿ ಅಭ್ಯರ್ಥಿ ಎ ಮಂಜು ಅವರು ಸೋಲು ಅನುಭವಿಸಿದ್ದಾರೆ.
ಒಟ್ಟಾರೆಯಾಗಿ ಈ ಚುನಾವಣೆಯಲ್ಲಿ ಈ ಮೂವರು ಅಭ್ಯರ್ಥಿಗಳು ರಾಷ್ಟ್ರ ರಾಜಕಾರಣದಲ್ಲಿ ಮೊದಲ ಬಾರಿಗೆ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
Comments are closed.