ಕರ್ನಾಟಕ

ಕೊಡಗು,ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ ಕಿಚ್ಚ ಸುದೀಪ್

Pinterest LinkedIn Tumblr

ಬೆಂಗಳೂರು: ಪ್ರಾಕೃತಿಕ ವೈವಿಧ್ಯಮಯ ತಾಣವಾದ ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಂಭೀರ ಸ್ವರೂಪದ ಕಾಯಿಲೆಗಳು ಹಾಗೂ ಅಪಘಾತಗಳ ಸಂದರ್ಭದಲ್ಲಿ ತಕ್ಷ ಣದ ಚಿಕಿತ್ಸೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ ಮಾಡಬೇಕು ಎಂಬ ಆಗ್ರಹದ ಅಭಿಯಾನ ಇದೀಗ ಪ್ರಾರಂಭಗೊಂಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರಂಭವಾಗಿರುವ ಈ ಅಭಿಯಾನ ದಿನದಿಂದ ದಿನಕ್ಕೆ ವ್ಯಾಪಕತೆಯನ್ನು ಪಡೆದುಕೊಳ್ಳುತ್ತಿದೆ. ನೆಟ್ಟಿಗರು ಫೇಸ್ ಬುಕ್, ಟ್ವಿಟರ್, ವಾಟ್ಸಾಪ್ ಗಳನ್ನು ಬಳಕೆ ಮಾಡಿಕೊಳ್ಳುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸುತ್ತಿದ್ದಾರೆ.

ಈ ಅಭಿಯಾನಕ್ಕೆ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್, ರವಿಚಂದ್ರನ್ , ಪುನೀತ್ ರಾಜ್ ಕುಮಾರ್, ರಶ್ಮಿಕಾ ಮಂದಣ್ಣ , ಹರ್ಷಿಕಾ ಪೂಣಚ್ಚ ಹೀಗೆ ಹಲವಾರು ಸ್ಯಾಂಡಲ್ ವುಡಿನ ನಟ, ನಟಿಯರು ಬೆಂಬಲ ವ್ಯಕ್ತಪಡಿಸಿದ್ದರು.

ಇದೀಗ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಕೂಡಾ ಈ ಅಭಿಯಾನಕ್ಕೆ ಕೈ ಜೋಡಿಸಿದ್ದು, ಕೊಡಗು,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು ಗಮನ ಹರಿಸಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Comments are closed.