ಕರ್ನಾಟಕ

ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಿದವರು ಯಾರು ಹೇಳಿ?; ಯಡಿಯೂರಪ್ಪ

Pinterest LinkedIn Tumblr


ಬೆಂಗಳೂರು (ಜೂನ್​.19); ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಕೆಡವಲು ವಿರೋಧ ಪಕ್ಷದ ಯಾವ ಮುಖಂಡ ಪ್ರಯತ್ನ ನಡೆಸುತ್ತಿದ್ದಾರೆ? ಅವರ ಹೆಸರನ್ನು ಬಹಿರಂಗಪಡಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಿಎಂ ಕುಮಾರಸ್ವಾಮಿಯನ್ನು ಒತ್ತಾಯಿಸಿದ್ದಾರೆ.

ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತೆ ಅಪರೇಷನ್​ ಕಮಲಕ್ಕೆ ಚಾಲನೆ ನೀಡಿದೆ. ಬಿಜೆಪಿ ಪಕ್ಷದ ನಾಯಕನೊಬ್ಬ ನಡುರಾತ್ರಿ ಮೈತ್ರಿ ಶಾಸಕರಿಗೆ ಕರೆ ನೀಡಿ 10 ಕೋಟಿ ಆಮಿಷ ಒಡ್ಡುತ್ತಿದ್ದಾರೆ ಎಂದು ಮಂಗಳವಾರ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಆರೋಪ ಹೊರಿಸಿದ್ದರು.

ಈ ಕುರಿತು ಬುಧವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿದ ಯಡಿಯೂರಪ್ಪ, “ಮುಖ್ಯಮಂತ್ರಿ ಕುಮಾರಸ್ವಾಮಿ ಮನಸ್ಸಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ವಿರೋಧ ಪಕ್ಷ ಸರ್ಕಾರವನ್ನು ಕೆಡವಲು ಮುಂದಾಗುವುದಿಲ್ಲ ಎಂದು ತಿಳಿಸಿದ ನಂತರವೂ ನಮ್ಮ ಮೇಲೆ ವ್ಯರ್ಥ ಆರೋಪಗಳನ್ನು ಮಾಡುತ್ತಿದ್ದಾರೆ. ಇದರ ಬದಲು ಮೈತ್ರಿ ಶಾಸಕರಿಗೆ ಹಣದ ಆಮಿಷ ಒಡ್ಡಿದ ನಾಯಕ ಯಾರು? ಎಂದು ಸಾಕ್ಷಿ ಸಮೇತ ತಿಳಿಸಿದರೆ ಮುಖ್ಯಮಂತ್ರಿಗಳಿಗೂ ಗೌರವ ಬರುತ್ತದೆ” ಎಂದು ಅವರು ಕಿಡಿಕಾರಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. 20ಕ್ಕೂ ಹೆಚ್ಚು ಶಾಸಕರಿಗೆ ಕುಮಾರಸ್ವಾಮಿಯವರ ನಾಯಕತ್ವದ ವಿರುದ್ಧ ಭಿನ್ನಾಭಿಪ್ರಾಯವಿದೆ. ಆದರೆ, ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಅವರು ಎಡವಿದ್ದಾರೆ. ಇದನ್ನು ಮರೆಮಾಚಲು ಜನರ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ಬಿಜೆಪಿ ಅಪರೇಷನ್​ ಕಮಲ ಎಂದು ಅವರು ಬಡಬಡಿಸುತ್ತಿದ್ದಾರೆ. ಅಸಲಿಗೆ ಅವರು ಹೀಗೆ ಹೇಳುವ ಮೂಲಕ ತಮ್ಮದೇ ಶಾಸಕರ ವಿರುದ್ಧ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗೆ ವರ್ತಿಸುವ ಬದಲು ಎಲ್ಲರನ್ನೂ ಆಡಳಿತದಲ್ಲಿ ಜೊತೆಜೊತೆಗೆ ಕರೆದುಕೊಂಡು ಹೋಗಲಿ ಎಂದು ಸಲಹೆ ನೀಡಿದ್ದಾರೆ.

Comments are closed.