ಅಂತರಾಷ್ಟ್ರೀಯ

ನ್ಯೂ ಜೆರ್ಸಿಯಲ್ಲಿಂದು ಕಾಲಭೈರವೇಶ್ವರ ದೇವಾಲಯ ನಿರ್ಮಾಣಕ್ಕೆ ಕುಮಾರಸ್ವಾಮಿಯಿಂದ ಶಿಲಾನ್ಯಾಸ

Pinterest LinkedIn Tumblr


ಬೆಂಗಳೂರು (ಜೂ.30): ನ್ಯೂ ಜೆರ್ಸಿಯ ಸೋಮರ್‍ಸೆಟ್​ನ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯ ನಿರ್ಮಿಸುತ್ತಿದೆ. ಇದರ ಭೂಮಿ ಪೂಜೆಗೆ ಸಂಬಂಧಿಸಿ ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಪಾಲ್ಗೊಂಡರು.

ನಂತರ ಮಾತನಾಡಿದ ಎಚ್​ಡಿಕೆ, “ಆದಿಚುಂಚನಗಿರಿ ಮಹಾಸಂಸ್ಥಾನ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಾಲಯವನ್ನು ನಿರ್ಮಿಸುತ್ತಿದೆ. ಈ ಈ ದೇವಾಲಯವು ಭಾರತೀಯರು, ಅದರಲ್ಲೂ ಕನ್ನಡಿಗರ ಪ್ರಮುಖ ಸಾಂಸ್ಕತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ. ಹೊರದೇಶದಲ್ಲಿರುವ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು, ಸಂಸ್ಕತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ,” ಎಂದು ಅಭಿಪ್ರಾಯಪಟ್ಟರು.

ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಕನ್ನಡಗಿರು ಪಾಲ್ಗೊಳ್ಳಬೇಕು ಎಂದು ಕೋರಿದ ಅವರು, “ನ್ಯೂಜೆರ್ಸಿಯಲ್ಲಿ ನೆಲೆಸಿರುವ ಕನ್ನಡಿಗರು ಈ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಮನಃಪೂರ್ವಕವಾಗಿ ಕೈಜೋಡಿಸಬೇಕು,” ಎಂದು ಮನವಿ ಮಾಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿವೆ. ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಕುಮಾರಸ್ವಾಮಿಗೆ ಸಾತ್​ ನೀಡಿದ್ದಾರೆ.

ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ಇಂದು ಕಾಲ ಭೈರವೇಶ್ವರ ದೇವಾಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಆದಿ ಚುಂಚನಗಿರಿ ವತಿಯಿಂದ ನಿರ್ಮಿಸುವ ದೇವಸ್ಥಾನದ ಶಿಲಾನ್ಯಾಸಕ್ಕೆ ಸಿಎಂ ಕುಮಾರಸ್ವಾಮಿ, ಸಚಿವ ಪುಟ್ಟರಾಜು, ಸಾರಾ ಮಹೇಶ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

Comments are closed.