ಬೆಂಗಳೂರು: ಶಾಸಕ ಸ್ಥಾನಕ್ಕೆ ತಾವು ರಾಜಿನಾಮೆ ನೀಡಿರುವ ವಿಷಯವನ್ನು ಖುದ್ದು ಆನಂದ್ ಸಿಂಗ್ ಅವರೇ ಖಚಿತಪಡಿಸಿದ್ದಾರೆ.
ರಾಜಭವನಕ್ಕೆ ಮುನ್ನ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ್ ಸಿಂಗ್ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ಅವರು ನನ್ನ ರಾಜಿನಾಮೆ ಪತ್ರ ಸಿಕ್ಕಿಲ್ಲ ಎಂದು ಹೇಳಿದ್ದಾರೆ, ಹೀಗಾಗಿ ಮತ್ತೊಮ್ಮೆ ರಾಜಿನಾಮೆ ಪತ್ರ ಸಲ್ಲಿಸುವೆ ಎಂದು ಹೇಳಿದ್ದಾರೆ.
ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಎಲ್ಲಾ ವಿಷಯಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.
Comments are closed.