ಬೆಂಗಳೂರು: 11 ಜನ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆಂದು ಕಚೇರಿಯಿಂದ ಮಾಹಿತಿ ಬಂದಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಭೇಟಿಗೆ ಯಾರು ಸಮಯ ಕೇಳಿರಲಿಲ್ಲ. ಪತ್ರ ಕೂಡ ಬರೆದಿರಲಿಲ್ಲ. 11 ಶಾಸಕರು ರಾಜೀನಾಮೆ ನೀಡಿದ್ದಾರೆಂದು ನನ್ನ ಕಚೇರಿಯಿಂದ ಮಾಹಿತಿ ಬಂದಿದೆ. ರಾಜೀನಾಮೆ ಪತ್ರ ಸಲ್ಲಿಸಿದ ಶಾಸಕರಿಗೆ ಸ್ವೀಕೃತಿ ಪತ್ರ ನೀಡಲಾಗಿದೆ ಎಂದು ಹೇಳಿದ್ದಾರೆ.
ನಾಳೆ ಭಾನುವಾರ ಕಚೇರಿಗೆ ರಜೆ ಇದ್ದು, ಸೋಮವಾರ ಪೂರ್ವ ನಿಗದಿತ ಕಾರ್ಯಕ್ರಮವಿರುವ ಕಾರಣ ಕಚೇರಿಗೆ ಬರುವುದಿಲ್ಲ. ಮಂಗಳವಾರ ಕಚೇರಿಗೆ ಬಂದು ರಾಜೀನಾಮೆ ಪತ್ರ ಪರಿಶೀಲಿಸುತ್ತೇನೆ ಎಂದಿದ್ದಾರೆ.
ಸ್ವೀಕರ್ ರಮೇಶ್ ಕುಮಾರ್ ಅವರು ಕಚೇರಿಯಲ್ಲಿರದ ಕಾರಣ ಕಾಂಗ್ರೆಸ್‌ನ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಸೇರಿದಂತೆ ಮಹಾಲಕ್ಷೀ ಲೇಔಟ್ ಶಾಸಕ ಗೋಪಾಲಯ್ಯ, ಹುಣಸೂರು ಶಾಸಕ ವಿಶ್ವನಾಥ್ ಮತ್ತು ಕೆ.ಆರ್ ಪೇಟೆ ಶಾಸಕ ನಾರಾಯಣ ಗೌಡ ಅವರು ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ ರಾಜಭವನದತ್ತ ಹೊರಟಿದ್ದರೆ, ಇನ್ನುಳಿದ ನಾಲ್ವರು ಅತೃಪ್ತ ಶಾಸಕರ ಮನವೊಲಿಕೆಗೆ ಸಚಿವ ಡಿ.ಕೆ.ಶಿವಕುಮಾರ್ ಯತ್ನಿಸುತ್ತಿದ್ದಾರೆ.
Comments are closed.