ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಒಟ್ಟಾರೇ 14 ಮಂದಿ ಶಾಸಕರು ಸ್ಪೀಕರ್ ಗೆ ರಾಜೀನಾಮೆ ನೀಡಿರುವುದಾಗಿ ಜೆಡಿಎಸ್ ಪಕ್ಷದ ಶಾಸಕ ಹೆಚ್. ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.
ರಾಜಭವನದಲ್ಲಿಂದು ರಾಜ್ಯಪಾಲರನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲವಾಗಿದೆ. ಉಭಯ ಪಕ್ಷಗಳ ಶಾಸಕರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ.ಸರ್ಕಾರದ ನಡೆ , ಧೋರಣೆ ವಿರುದ್ಧ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು.
ಉಭಯ ಪಕ್ಷಗಳ ಶಾಸಕರ ನಡುವೆ ಸಮನ್ವಯ ಸಾಧಿಸುವ ವಿಚಾರದಲ್ಲೂ ಮುಖಂಡರು ವಿಫಲವಾಗಿದ್ದಾರೆ. ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಸತ್ತು ಹೋಗಿದೆ.ಈ ಎಲ್ಲಾ ಕಾರಣಗಳಿಂದ ತಮ್ಮ ಇಚ್ಚೆನುಸಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.
ಎಲ್ಲಾ ಅತೃಪ್ತ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇವೆ. ರಾಜೀನಾಮೆ ಅಂಗೀಕರಿಸುವಂತೆ ರಾಜ್ಯಪಾಲರಿಗೆ ಪ್ರತ್ಯೇಕವಾಗಿ ಪತ್ರ ಬರೆದು ಮನವಿ ಮಾಡಿದ್ದೇವೆ. ಸ್ಪೀಕರ್ ಕೂಡಾ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.ಆಪರೇಷನ್ ಕಮಲಕ್ಕೆ ಬಲಿಯಾಗಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ವಿಶ್ವನಾಥ್ ಹೇಳಿದರು.
Comments are closed.