ಕರ್ನಾಟಕ

14 ಶಾಸಕರ ರಾಜೀನಾಮೆ! ಸಂಕಷ್ಟದಲ್ಲಿ ಸಮ್ಮಿಶ್ರ ಸರ್ಕಾರ!

Pinterest LinkedIn Tumblr


ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ದಿಢೀರ ರಾಜಕೀಯ ಬೆಳವಣಿಗೆಯಲ್ಲಿ ಸ್ಪೀಕರ್ ಕಚೇರಿಗೆ ತೆರಳಿದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಎಚ್​.ವಿಶ್ವನಾಥ್ ಸೇರಿದಂತೆ ಒಟ್ಟು 14 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಮಲಿಂಗಾ ರೆಡ್ಡಿ, ಸೌಮ್ಯ ರೆಡ್ಡಿ, ಭೈರತಿ ಬಸವರಾಜು, ಮುನಿರತ್ನ, ಶಿವರಾಂ ಹೆಬ್ಬಾರ್, ಬಿ.ಸಿ.ಪಾಟೀಲ್, ಮಹೇಶ್ ಕುಮಟಳ್ಳಿ, ಗೋಪಾಲಯ್ಯ, ರಮೇಶ್ ಜಾರಕಿಹೊಳಿ, ಆನಂದ ಸಿಂಗ್, ಸೇರಿದಂತೆ ಒಟ್ಟು 14 ಶಾಸಕರು ರಾಜೀನಾಮೆ ನೀಡಿದ್ದಾರೆ.

ಸ್ಪೀಕರ್ ರಮೇಶ್ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿ ವಿಶಾಲಾಕ್ಷಿಯವರಿಗೆ ರಾಜೀನಾಮೆ ಪತ್ರ ರವಾನಿಸಿದ ಶಾಸಕರುಗಳು ಬಳಿಕ ರಾಜ್ಯಪಾಲರ ಭೇಟಿಗೆ ತೆರಳಿದರು.

ರಾಜ್ಯಪಾಲರ ಭೇಟಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಿರಿಯ ಶಾಸಕ ಎಚ್.ವಿಶ್ವನಾಥ್, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸರ್ಕಾರ ಎರಡು ಪಕ್ಷದ ಶಾಸಕರ ನಡುವೆ ಸಮನ್ವಯ ಸಾಧಿಸುವಲ್ಲಿ ವಿಫಲವಾಗಿದೆ.

ಸರ್ಕಾರದಲ್ಲಿ ಶಿಕ್ಷಣ ವ್ಯವಸ್ಥೆ ಸತ್ತು ಹೋಗಿದೆ. ಜನತೆಯ ಹಾಗೂ ಶಾಸಕರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ನಾವು 14 ಶಾಸಕರು ನಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ.

ಇದು ಆಫರೇಶನ್ ಕಮಲ ಅಲ್ಲ. ನಾವೆಲ್ಲ ನಮ್ಮ ಆಶಯಗಳಿಗೆ ಬೆಲೆ ಸಿಗದ ಕಾರಣಕ್ಕೆ ರಾಜೀನಾಮೆ ನೀಡಿದ್ಧೇವೆ ಎಂದಿದ್ದಾರೆ. ಈ ಬೆಳವಣಿಗೆಯಿಂದ ಸಮ್ಮಿಶ್ರ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ.

Comments are closed.