ಬೆಂಗಳೂರು: ಕರಾವಳಿ, ಉತ್ತರ ಕರ್ನಾಟಕ, ಮಡಿಕೇರಿ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿವರೆಗೆ) ಆ.7ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆ ಜೋರಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಿದ್ದು, ಆ. 7 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿಯೂ ಭಾರಿ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ರಜೆ ಘೋಷಿಸಲಾಗಿದೆ. ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ಆ.7ರಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದ್ದು, ಕಡೂರು ಮತ್ತು ತರೀಕೆರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲ.
Comments are closed.