ಕರ್ನಾಟಕ

ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ಸುಧಾ ಮೂರ್ತಿ: ಸಿಎಂ ಪರಿಹಾರ ನಿಧಿಗೆ 10 ಕೋಟಿ ದೇಣಿಗೆ!

Pinterest LinkedIn Tumblr

ಬೆಂಗಳೂರು: ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅಲ್ಲದೆ ಪರಿಹಾರಕ್ಕಾಗಿ ಎದುರು ನೋಡುತ್ತಿದ್ದು ಇದಕ್ಕೆ ಸ್ಪಂಧಿಸಿರುವ ಸುಧಾ ಮೂರ್ತಿ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ.

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಅವರು ಸಿಎಂ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಿಳಿಸಿದ್ದಾರೆ.

ಕುಂದಾನಗರಿ ಬೆಳಗಾವಿಯಲ್ಲಿಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣ ಮಾಡಿಕೊಡಲಾಗುವುದು, ಆಸ್ತಿ ನಷ್ಟವಾದವರಿಗೂ ಪರಿಹಾರ ನೀಡಲಾಗುವುದು, ಪ್ರವಾಹದಲ್ಲಿ ಮೃತರಾದವರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

Comments are closed.