ಕರ್ನಾಟಕ

ಕರ್ನಾಟಕ ಭೀಕರ ಪ್ರವಾಹಕ್ಕೆ ಬಲಿಯಾಗಿರುವವರ ಸಂಖ್ಯೆ 40ಕ್ಕೆ ಏರಿಕೆ; 14 ಮಂದಿ ಕಣ್ಮರೆ- 17 ಜಿಲ್ಲೆಗಳ 80 ತಾಲೂಕುಗಳಲ್ಲಿನ 2028 ಗ್ರಾಮಗಳು ಜಲಾವೃತ

Pinterest LinkedIn Tumblr

ಬೆಂಗಳೂರು: ಹಿಂದೆಂದೂ ಕಂಡರಿಯದ ರೀತಿಯಲ್ಲಿ ಭೀಕರ ಪ್ರವಾಹಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಆಗಸ್ಟ್ 1ರಿಂದಲೂ ಈವರೆಗೂ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆ ಆಗಿದೆ. 14 ಜನರು ಕಣ್ಮರೆಯಾಗಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದಲ್ಲಿನ 17 ಜಿಲ್ಲೆಗಳ 80 ತಾಲೂಕುಗಳಲ್ಲಿನ 2028 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು, 5 ಲಕ್ಷದ 81 ಸಾವಿರದ 702 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

50 ಸಾವಿರದ 595 ಜಾನುವಾರುಗಳನ್ನು ರಕ್ಷಿಸಲಾಗಿದೆ. 1168 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 3 ಲಕ್ಷದ 27 ಸಾವಿರದ 354 ಜನರು ಆಶ್ರಯ ಪಡೆದುಕೊಂಡಿದ್ದಾರೆ. 28 ಸಾವಿರದ 325 ಮನೆಗಳಿಗೆ ಹಾನಿಯಾಗಿದ್ದು, 4.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಷ್ಟ ಉಂಟಾಗಿದೆ .

Comments are closed.