ದಾವಣಗೆರೆ: ದಾವಣಗೆರೆಯಲ್ಲಿ ಮಾತನಾಡಿದ ಎಂಪಿ ರೇಣುಕಾಚಾರ್ಯ, ಕಾಂಗ್ರೆಸ್- ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಫೋನ್ ಟ್ರ್ಯಾಪ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಕುಮಾರಸ್ವಾಮಿ ಸರ್ಕಾರ ಉಳಿಸಿಕೊಳ್ಳಲು ಹಲವರ ಫೋನ್ ಟ್ರ್ಯಾಪ್ ಮಾಡಿಸಿದ್ದಾರೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕುಮಾರಸ್ವಾಮಿ ನನ್ನ ಪೋನ್ ಟ್ರ್ಯಾಪ್ ಮಾಡಿದ್ರು. ಅಪರೇಷನ್ ಕಮಲ ಮಾಡುತ್ತೇವೆ ಎಂದು ಭಯದಿಂದ ಟ್ರ್ಯಾಪ್ ಮಾಡಿದ್ದರು ಎನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಅಲ್ಲದೇ, ಮಾಜಿ ಸಿಎಂ ಸಿದ್ದರಾಮಯ್ಯನವರ ಫೋನ್ ಕೂಡ ಟ್ರ್ಯಾಪ್ ಮಾಡಿದ್ದಾರೆ. ಬಿಜೆಪಿಯ ಹಲವು ನಾಯಕರ ಪೋನ್ ಟ್ರ್ಯಾಪ್ ಮಾಡಿದ್ದಾರೆ. ಹೀಗಾಗಿ ಟ್ರ್ಯಾಪ್ ಕೇಸನ್ನ ಸಿಬಿಐಗೆ ವಹಿಸಬೇಕೆಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಇನ್ನು ಸಚಿವ ಸ್ಥಾನದ ಬಗ್ಗೆ ಮಾತನಾಡಿದ ರೇಣುಕಾಚಾರ್ಯ, ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ. ಸಚಿವ ಸ್ಥಾನ ಕೊಟ್ಟರೆ ನಿರ್ವಹಿಸುತ್ತೇನೆ. ಇಲ್ಲವಾದ್ರೆ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.
Comments are closed.