ನವದೆಹಲಿ: ಅನರ್ಹ ಶಾಸಕರ ಅರ್ಜಿಯ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನಾಯಮೂರ್ತಿಗಳ ಪೀಠ ಇಂದು ಸ್ಪಷ್ಟಪಡಿಸಿದೆ ಸ್ಪೀಕರ್ ರಮೇಶ್ ಕುಮಾರ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೇಟ್ಟಿಲೇರಿದ್ದ 17 ಅನರ್ಹ ಶಾಸಕರಿಗೆ ಮತ್ತೊಮ್ಮೆ ಹಿನ್ನೆಡೆಯಾಗಿದೆ.
ಅಯೋಧ್ಯೆ ರಾಮ ಜನ್ಮ ಭೂಮಿ ಪ್ರಕರಣ ಸಂಬಂಧ ಪ್ರತಿದಿನ ವಿಚಾರಣೆ ನಡೆಯುತ್ತಿದ್ದು, ಅನರ್ಹ ಶಾಸಕರ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅರ್ಜಿದಾರರ ಪರ ವಕೀಲ ಮುಕುಲ್ ರೋಹಟಗಿ ಅವರಿಗೆ ಸೂಚಿಸಿದ್ದಾರೆ.
ಆದರೆ ಶೀಘ್ರದಲ್ಲಿ ವಿಚಾರಣಾ ದಿನಾಂಕವನ್ನು ನಿಗದಿಗೊಳಿಸುತ್ತೇವೆ. ಸಾಧ್ಯವಾದರೆ ಮತ್ತೊಂದು ಪೀಠದಲ್ಲಿ ವಿಚಾರಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ ಬಗ್ಗೆ ರಿಜಿಸ್ಟ್ರಾರ್ ಜನರಲ್ ಅವರ ಬಳಿ ತೆರಳಿ ವಿಚಾರಣೆಗೆ ದಿನಾಂಕ ನಿಗದಿ ಮಾಡಿ ಎಂದು ಪೀಠ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ.
Comments are closed.