ಕರ್ನಾಟಕ

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ರೇಣುಕಾಚಾರ್ಯ ನೇಮಕ

Pinterest LinkedIn Tumblr


ಬೆಂಗಳೂರು: ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದ ಹೊನ್ನಾಳಿಯ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಸಂಪುಟ ದರ್ಜೆಯ ಸ್ಥಾನಮಾನ‌ ನೀಡಿ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎಂ.ಪಿ. ರೇಣುಕಾಚಾರ್ಯ ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ.

ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿರುವ ರೇಣುಕಾಚಾರ್ಯ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಮೊದಲ ಹಂತದಲ್ಲಿ ರಚನೆಗೊಂಡ ಸಚಿವ ಸಂಪುಟದಲ್ಲಿ ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ರೇಣುಕಾಚಾರ್ಯ ಅವರನ್ನು ಸಮಾಧಾನಪಡಿಸಲು ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

Comments are closed.