ಕರ್ನಾಟಕ

ಡಿಕೆಶಿ ಸಹೋದರ ಡಿಕೆ ಸುರೇಶ್ ಗೂ ಇ.ಡಿ. ಸಮನ್ಸ್ ಜಾರಿ

Pinterest LinkedIn Tumblr


ಬೆಂಗಳೂರು/ನವದೆಹಲಿ:ಅಕ್ರಮ ಹಣ ವರ್ಗಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಏತನ್ಮಧ್ಯೆ ಸಹೋದರ, ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾಗೆ ಸಾಲ ನೀಡಿರುವುದು ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಒಟ್ಟು 338 ಕೋಟಿ ರೂಪಾಯಿ ಆಸ್ತಿ ಇದ್ದಿರುವುದಾಗಿ ಡಿಕೆ ಸುರೇಶ್ ಘೋಷಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಇ.ಡಿ ಸಮನ್ಸ್ ಜಾರಿ ಮಾಡಿದೆ.

ತಂದೆ ಕೆಂಪೇಗೌಡರ ಹೆಸರಿನಲ್ಲಿದ್ದ ಎಲ್ಲಾ ಆಸ್ತಿ ಡಿಕೆ ಸುರೇಶ್ ಹೆಸರಿಗೆ ವರ್ಗಾವಣೆ ಆಗಿರುವ ಬಗ್ಗೆಯೂ ವಿಚಾರಣೆ ನಡೆಯಬೇಕಾಗಿದೆ ಎಂದು ಇ.ಡಿ ತಿಳಿಸಿರುವುದಾಗಿ ವರದಿ ಹೇಳಿದೆ.

Comments are closed.