ಬೆಂಗಳೂರು: ಇದು ಬಿಟಿವಿಯ ಎಕ್ಸ್ಕ್ಲೂಸಿವ್ ಬ್ರೇಕಿಂಗ್ ನ್ಯೂಸ್ ಹಾಗೂ ರಾಜ್ಯ ರಾಜಕಾರಣದ ಸ್ಫೋಟಕ ಸುದ್ದಿ. ಕರ್ನಾಟಕದಲ್ಲಿ ಮತ್ತೊಂದು ಕ್ರಾಂತಿಕಾರಿ ಬದಲಾವಣೆ ನಡೆಯುವುದು ಖಂಡಿತಾ. ಇದಕ್ಕಾಗಿ ತೆರೆಮರೆಯಲ್ಲೇ ಇಬ್ಬರು ಮಹಾನ್ ನಾಯಕರು ಮೆಗಾ ಯೋಜನೆ ರೂಪಿಸುತ್ತಿದ್ದಾರೆ.
ಮೂರ್ನಾಲ್ಕು ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯಂತೆ ಸುನಾಮಿ ಏಳುವ ಸಾಧ್ಯತೆಯಿದೆ. ರಾಜ್ಯದ ಇಬ್ಬರು ಪ್ರಮುಖ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹೊಸ ಪಕ್ಷ ಉದಯವಾಗಲಿದೆ.
ಬಿಜೆಪಿಯಲ್ಲಿ ಏಕಾಂಗಿಯಾಗ್ತಿರೋ ಬಿ.ಎಸ್. ಯಡಿಯೂರಪ್ಪ ಹಾಗೂ ಕಾಂಗ್ರೆಸ್ನಲ್ಲಿ ಮೂಲೆಗುಂಪಾಗುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಪಕ್ಷ ಸಿದ್ಧತೆ ನಡೆಸುತ್ತಿದ್ದಾರೆ. ಡಿಸೆಂಬರ್ ಬಳಿಕ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವುದು ಖಂಡಿತಾ ಎಂದು ಈಗಾಗಲೇ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ. ಪ್ರಸ್ತುತ ಪರಿಸ್ಥಿತಿಗಳನ್ನು ಗಮನಿಸಿದರೆ ಕಾಂಗ್ರೆಸ್ನಲ್ಲೂ ಕೂಡ ಸಿದ್ದರಾಮಯ್ಯ ಅವರಿಗೆ ಪ್ರತಿಪಕ್ಷ ನಾಯಕ ಸ್ಥಾನ ಸಿಗುವುದು ಅನುಮಾನವಿದೆ.
ಇವೆಲ್ಲದರ ಹಿನ್ನಲೆಯಲ್ಲಿ 30 ಶಾಸಕರ ಜೊತೆ ಸಿದ್ದರಾಮಯ್ಯ ಕಾಂಗ್ರೆಸಿನಿಂದ ಹೊರ ಬಂದರೆ, ಬಿಜೆಪಿಯಿಂದ ಅಷ್ಟೆ ಶಾಸಕರ ಜತೆ ಬಿಎಸ್ವೈ ಪಕ್ಷಕ್ಕೆ ಗುಡ್ ಬೈ ಹೇಳುವ ಸಾಧ್ಯತೆ ನಿಚ್ಚಳವಾಗಿದೆ. ಇದೇ ಕಾರಣಕ್ಕಾಗಿ ಬಿಎಸ್ವೈ ಮೇಲೆ ಸಿದ್ದು ಸಾಫ್ಟ್ ಕಾರ್ನರ್ ಹೊಂದಿದ್ದಾರೆ.
ಮತ್ತೊಂದೆಡೆ ಇಬ್ಬರು ನಾಯಕರು ತಮ್ಮ ತಮ್ಮ ಸಮುದಾಯದ ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಕುರುಬ ಸಮಾವೇಶಗಳನ್ನು ನಡೆಸುತ್ತಿದ್ದರೆ, ಯಡಿಯೂರಪ್ಪ ಲಿಂಗಾಯತ ಸಮಾವೇಶಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇಬ್ಬರ ಮಧ್ಯೆ ಶಾಸಕರೊಬ್ಬರು ಸಮನ್ವಯ ಸಾಧಿಸುತ್ತಿದ್ದಾರೆ. ಈ ಕಾರಣದಿಂದ ಕೆಲವೇ ತಿಂಗಳಲ್ಲಿ ಇಬ್ಬರು ನಾಯಕರ ನೇತೃತ್ವದಲ್ಲಿ ಹೊಸ ಪಕ್ಷ ಉದಯವಾಗುವುದು ಖಂಡಿತಾ.
Comments are closed.