ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರು ಸ್ವಕ್ಷೇತ್ರ ಜಿಲ್ಲೆಗೆ ಮತ್ತೆ ಭರಪೂರ ಕೊಡುಗೆ ನೀಡಿದ್ದಾರೆ.
ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗಕ್ಕೆ ಆಗಮಿಸಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಒಂದು ವಾರದ ಒಳಗಾಗಿ ಪ್ರಾರಂಭವಾಗಲಿದೆ. ವರ್ತುಲ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ದು ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು. ವರ್ತುಲ ರಸ್ತೆ ನಿರ್ಮಾಣದಿಂದ ಅಕ್ಕಪಕ್ಕದ ಜಮೀನುಗಳ ಬೆಲೆ ಹೆಚ್ಚಿ, ನಗರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು.
ತುಮಕೂರು – ಶಿವಮೊಗ್ಗ ಚತುಷ್ಪಥ ಹೆದ್ದಾರಿ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳ್ಳಲಿದೆ. ಭದ್ರಾವತಿಯಲ್ಲಿ ಆರ್ ಎಪಿಎಫ್ ತರಬೇತಿ ಕೇಂದ್ರ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹಣಕಾಸು ನೆರವು ಒದಗಿಸಲಾಗಿದೆ ಎಂದರು.
ಶಿವಮೊಗ್ಗ ನಗರದಲ್ಲಿರುವ ಗಾಂಧಿಪಾರ್ಕ್ ಇನ್ನಷ್ಟು ಸುಂದರಗೊಳಿಸಲು ಕಾಮಗಾರಿ ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ಒತ್ತಾಯದ ಮೇರೆಗೆ ಶಿವಮೊಗ್ಗ ನಗರದಲ್ಲಿ ಜಾರಿಯಲ್ಲಿದ್ದ ಪ್ರಾಪರ್ಟಿ ಕಾರ್ಡ್ ಪದ್ಧತಿಯಿಂದ ವಿನಾಯಿತಿ ನೀಡಲಾಗುವುದು ಎಂದು ಹೇಳಿದರು.
ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ 420 ಕೋಟಿ ರೂ. ವೆಚ್ಚದಲ್ಲಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಶಿವಪ್ಪ ನಾಯಕ ಅರಮನೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಸೌಂಡ್ ಮತ್ತು ಲೈಟ್ ವ್ಯವಸ್ಥೆ ಆರಂಭಿಸಲಾಗುವುದು. ಜಿಲ್ಲೆಯ ಪ್ರವಾಸಿತಾಣಗಳ ಅಭಿವೃದ್ಧಿಗೆ 8 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
Comments are closed.