ಬೆಂಗಳೂರು: ರಾಜ್ಯದ ಜನರನ್ನು ಲೂಟಿ ಮಾಡುವ ಸಲುವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಇನ್ನು ಎರಡು ತಿಂಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಬಿ.ಎಸ್.ಯಡಿಯೂರಪ್ಪ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನರ ಬಳಿ ನೂರಾರು ಕೋಟಿ ಲೂಟಿ ಮಾಡುತ್ತಿದೆ. ತಮ್ಮ ಅಧಇಕಾರ ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ಆಯುಕ್ತ ಜಿ.ಸಿ ಪ್ರಕಾಶ್ ಅವರು ಬಿಜೆಪಿಗೆ ಲಂಚ ನೀಡಿದ್ದಾರೆ. ಲಂಚ ನೀಡಲು ಬಂದಿದ್ದವರನ್ನು ನಾನು ಕಿತ್ತೆಸೆದಿದ್ದೆ. ಆದರೆ, ಅವರನ್ನೇ ಮತ್ತೆ ಅದೇ ಸ್ಥಾನಕ್ಕೆ ನಿಯೋಜನೆಗೊಳಿಸಿದ್ದಾರೆಂದು ಹೇಳಿದ್ದಾರೆ.
ನಾನು ಅಧಿಕಾರಾವಧಿಯಲ್ಲಿ ಕೈಗೊಳ್ಳಲಾಗಿದ್ದ ಎಲ್ಲಾ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಹಿಂದೆಂದೂ ಕಂಡಿರದ ಬೆಳವಣಿಗೆಗಳು ರಾಜ್ಯದಲ್ಲಾಗುತ್ತಿವೆ. ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಕೈಗೊಂಡಿದ್ದ ನಿರ್ಧಾರಗಳನ್ನೇ ರದ್ದು ಕೊಂಡಿಸಿದ್ದಾರೆ? ಇದರ ಅರ್ಥವೇನು? ಕರ್ನಾಟಕ ಇತಿಹಾಸದಲ್ಲಿಯೇ ಈ ರೀತಿ ಆಗಿಲ್ಲ ಎಂದು ತಿಳಿಸಿದ್ದಾರೆ.
Comments are closed.