ಕರ್ನಾಟಕ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಹೃದಯಾಘಾತದಿಂದ ಮೃತ್ಯು.

Pinterest LinkedIn Tumblr

ಮೈಸೂರು : ಮೈಸೂರು ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಉತ್ತರ ಪ್ರದೇಶದ ಮೂಲದ ರಾಮರಾಜ್ ಅಲಿಯಾಸ್‌ ರಾಮನಾರಾಯಣ (45) ಮೃತ ಕೈದಿ. ಕಾರಾಗೃಹದಲ್ಲಿದ್ದ ರಾಮರಾಜ್ ಗೆ ಸೋಮವಾರ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಂಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕೈದಿಗೆ ಚನ್ನರಾಯಪಟ್ಟಣ ಫಾಸ್ಟ್‌ ಟ್ರಾಕ್‌ ಕೋರ್ಟ್ ನಲ್ಲಿ ಐಪಿಸಿ ಸೆಕ್ಷನ್ 302ರ ಅನ್ವಯ ಜೀವಾವಧಿ ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ 2014ರ ಅಕ್ಟೋಬರ್‌ 16ರಂದು ನ್ಯಾಯಾಧೀಶರು ತೀರ್ಪು ನೀಡಿದ್ದರು. ಮೃತನ ಹುಟ್ಟೂರು ಉತ್ತರ ಪ್ರದೇಶವಾಗಿರುವ ಕಾರಣ ಸಂಬಂಧಿಕರು ಪತ್ತೆ ಆಗಿಲ್ಲ. ಶವವನ್ನು ಕೆ.ಆರ್‌.ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.

Comments are closed.