ಗದಗ: ಮಹಿಳಾ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಸಂಭವಿಸಿದೆ.
ಮೃತ ಪೇದೆಯನ್ನು ಸೀಮಾ ಶಿವನಗೌಡರ (25) ಎಂದು ಗುರುತಿಸಲಾಗಿದೆ.
ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೀಮಾ, ನಗರದ ಸಂಭಾಪುರ ರಸ್ತೆಯಲ್ಲಿರುವ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಂದು ವರ್ಷದ ಹಿಂದೆ ಪ್ರೇಮ ವಿವಾಹವಾಗಿದ್ದ ಸೀಮಾ, 2 ತಿಂಗಳ ಗರ್ಭಿಣಿಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ .
Comments are closed.