ಕರ್ನಾಟಕ

ದನ ಬೆದರಿಸಲು ಹೋಗಿ ಗಾಯಗೊಂಡ ರೇಣುಕಾಚಾರ್ಯ

Pinterest LinkedIn Tumblr


ನ್ಯಾಮತಿ (ದಾವಣಗೆರೆ): ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿದೀಪಾವಳಿ ಹಬ್ಬದ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಸ್ಪರ್ಧೆಯ ಸಂದರ್ಭದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸೇರಿ ಐವರು ಗಾಯಗೊಂಡಿದ್ದಾರೆ.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ದೊಡ್ಡೇರಿ ಗ್ರಾಮಕ್ಕೆ ಆಗಮಿಸಿದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಗ್ರಾಮದ ದ್ವಾರ ಬಾಗಿಲಿನಿಂದ ಅಭಿಮಾನಿಗಳು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೋಗುತ್ತಿದ್ದರು. ಇದೇ ಸಂದರ್ಭದಲ್ಲಿಹೋರಿ ಬೆದರಿಸುವ ಸ್ಪರ್ಧೆ ಆರಂಭವಾಯಿತು.

ಈ ವೇಳೆ ಎದುರಿನಿಂದ ಹೋರಿಯೊಂದು ಗುಂಪಿನತ್ತ ನುಗ್ಗಿದ ಪರಿಣಾಮ ರೇಣುಕಾಚಾರ್ಯ ಆಯತಪ್ಪಿ ಕೆಳಕ್ಕೆ ಬಿದ್ದರು. ಆಗ ಅವರ ಎಡ ತೋಳು ಹಾಗೂ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಂತರ ಚಿಕಿತ್ಸೆ ಪಡೆದು ಮನೆಯಲ್ಲಿವಿಶ್ರಾಂತಿ ಪಡೆಯುತ್ತಿದ್ದಾರೆ. ಇವರ ಜತೆ ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್‌, ಶಿವು ಹುಡೇದ್‌ ಹಾಗೂ ಕೆಲ ಬಿಜೆಪಿ ಕಾರ್ಯಕರ್ತರಿಗೂ ಸಣ್ಣ- ಪುಟ್ಟ ಗಾಯಗಳಾಗಿವೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿಗ್ರಾಮೀಣ ಕ್ರೀಡಾಕೂಟವಾಗಿ ಹೋರಿ ಬೆದರಿಸುವ ಕಾರ್ಯಕ್ರಮವನ್ನು ತಾಲೂಕಿನ ದೊಡ್ಡೇರಿ, ಮಲ್ಲಿಗೇನಹಳ್ಳಿ, ಜೀನಹಳ್ಳಿ, ಸುರಹೊನ್ನೆ, ಚಟ್ನಹಳ್ಳಿ ಗ್ರಾಮಗಳಲ್ಲಿಆಯೋಜಿಸುವುದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯವಾಗಿದೆ.

Comments are closed.