ಬೆಂಗಳೂರು: ಅನರ್ಹ ಶಾಸಕರ ಇಂದು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ನಡೆದ ಕೋರ್‌ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸುಪ್ರೀಂ ಕೋರ್ಟ್ ತೀರ್ಪು ಬಳಿಕ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ ಮಾಡಿ ಅನರ್ಹ ಶಾಸಕರು ಮಾತುಕತೆ ನಡೆಸಿದ್ದಾರೆ. ಇಂದು ಅವರೆಲ್ಲರೂ ಬಿಜೆಪಿ ಕಚೇರಿಗೆ ಆಗಮಿಸಿ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಅನರ್ಹರ ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಸಿದ್ದು, ಬೆಳಗ್ಗೆ 10 ಗಂಟೆಗೆ ಅನರ್ಹರನ್ನು ಕಟೀಲ್ ಬಿಜೆಪಿ ಸದಸ್ಯತ್ವ ನೀಡಿ ಪಕ್ಷಕ್ಕೆ ಸ್ವಾಗತ ಮಾಡಲಿದ್ದಾರೆ ಎಂದರು.
ಉಪ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಕುರಿತು ಇನ್ನೂ ನಿರ್ಧಾರ ಆಗಿಲ್ಲ, ಸಧ್ಯ ಪಕ್ಷ ಸೇರ್ಪಡೆ ನಡೆಯಲಿದ್ದು ನಂತರ ಈ ಬಗ್ಗೆ ಮತ್ತೊಮ್ಮೆ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ತಿಳಿಸಿದರು.
Comments are closed.