ಬೆಂಗಳೂರು: ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಔರಾದ್ಕರ್ ವರದಿಯ ಬಗ್ಗೆ ಇಡೀ ಪೊಲೀಸ್ ಇಲಾಖೆಯ ಸಿಬ್ಬಂದಿ ಅಸಮಾಧಾನ ಹೊಂದಿದೆ. ಪೊಲೀಸರು ಪ್ರತಿಭಟನೆ ನಡೆಸಲು ಅವಕಾಶ ಇಲ್ಲದೇ ಇರುವ ಕಾರಣ ತಮ್ಮ ತಮ್ಮ ಇಲಾಖೆಯ ಸಿಬ್ಬಂದಿ ಜತೆ ತಮ್ಮ ನೋವು ತೋಡಿಕೊಳ್ಳುತ್ತಿದ್ದಾರೆ.
ಇದೀಗ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಹಾಗಾಗಿ ಪೊಲೀಸ್ ಸಿಬ್ಬಂದಿ ಮತ್ತು ಪೊಲೀಸ್ ಕುಟುಂಬಗಳು ಉಪ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಪೊಲೀಸರಿಂದ ಮತ ಬಹಿಷ್ಕಾರ: ಯಡಿಯೂರಪ್ಪನವರಿಗೆ ಈ ಸಂಬಂಧ ಪತ್ರ ಬರೆದಿದ್ದು, ರಾಜ್ಯ ಸರ್ಕಾರ ಔರಾದ್ಕರ್ ವರದಿ ಜಾರಿ ಮಾಡಿದ್ದರಿಂದ ಒಂದು ರೂಪಾಯಿಯಷ್ಟೂ ಉಪಯೋಗವಾಗಿಲ್ಲ ಎಂದು ಪೊಲೀಸ್ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಪೊಲೀಸ್ ಇಲಾಖೆಯಲ್ಲಿ ದುಡಿಯುವ ಸಿಬ್ಬಂದಿಗೆ 4ನೇ ಶನಿವಾರ ರಜೆ ಕೂಡ ರದ್ದು ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಸುಮಾರು 90 ಸಾವಿರದಿಂದ ಒಂದು ಲಕ್ಷ ನೌಕರರಿದ್ದು, ಎಲ್ಲಾ ಕುಟುಂಬಗಳು ಸರ್ಕಾರದ ಈ ಧೋರಣೆಯಿಂದ ಬೇಸರಗೊಂಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಉಪಚುನಾವಣೆ ಸೇರಿದಂತೆ ಮುಂದಿನ ಎಲ್ಲಾ ಚುನಾವಣೆಗಳಿಗೆ ಮತದಾನವನ್ನು ಬಹಿಷ್ಕಾರ ಮಾಡುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
Comments are closed.